ನೂತನ ಉಪರಾಷ್ಟ್ರಪತಿಗಳಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ: ಶುಭ ಕೋರಿದ ಪಿಎಂ ಮೋದಿ

ಸೆಪ್ಟೆಂಬರ್ 10, 2025 - 12:01
 0  14
ನೂತನ ಉಪರಾಷ್ಟ್ರಪತಿಗಳಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ: ಶುಭ ಕೋರಿದ ಪಿಎಂ ಮೋದಿ

ನವದೆಹಲಿ:- ನೂತನ ಉಪರಾಷ್ಟ್ರಪತಿಗಳಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಕೃಷ್ಣನ್ ಅವರಿಗೆ ಗೆಲುವು ದೊರೆತ್ತಿದ್ದು 17ನೇ ಉಪರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ. 452 ಮತಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ.  

ಸದ್ಯ ಉಪರಾಷ್ಟ್ರಪತಿ ಎಲೆಕ್ಷನ್ನಲ್ಲಿ ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಕೃಷ್ಣನ್ ಅವರು ಗೆಲುವು ಪಡೆದ ಹಿನ್ನೆಲೆಯಲ್ಲಿ ಎಲ್ಲರೂ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ ನಡ್ಡಾ ಸೇರಿದಂತೆ ಬಿಜೆಪಿ ಹಾಗೂ ಎನ್ಡಿಯ ಇತರೆ ಪಕ್ಷಗಳ ಸದಸ್ಯರು ನೂತನ ಉಪರಾಷ್ಟ್ರಪತಿಗಳಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ. ಇತ್ತ ವಿರೋಧ ಪಕ್ಷಗಳ ಸದಸ್ಯರು ಕೂಡ ಕಂಗ್ರಾಟ್ಸ್ ಹೇಳುತ್ತಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow