ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ದುರಂತ ಅಂತ್ಯ ಕಂಡ ಇನ್​ಸ್ಟಾಗ್ರಾಂ ಲವ್​​ ಸ್ಟೋರಿ!

ಸೆಪ್ಟೆಂಬರ್ 11, 2025 - 22:12
 0  23
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ದುರಂತ ಅಂತ್ಯ ಕಂಡ ಇನ್​ಸ್ಟಾಗ್ರಾಂ ಲವ್​​ ಸ್ಟೋರಿ!

ಕೊಪ್ಪಳ: ಹಿಂದೆಲ್ಲಾ ಒಬ್ಬರಿಗೊಬ್ಬರು ನೇರಾ ನೇರ ನೋಡಿ, ಪರಿಚಯ ಆಗಿ ಪ್ರೀತಿ-ಪ್ರೇಮದಲ್ಲಿ ಬೀಳ್ತಿದ್ದರು. ಈಗೇನಿದ್ರೂ ಜಾಲತಾಣಗಳ ಜಮಾನ. ಇಲ್ಲಿ ಸೋಷಿಯಲ್ ಮೀಡಿಯಾಗಳದ್ದೇ ಅಬ್ಬರ. ಆನ್​ಲೈನ್​ನಲ್ಲೇ ಪ್ರೀತಿ-ಪ್ರೇಮ-ಪ್ರಣಯ ಎಲ್ಲಾ. ಇನ್​ಸ್ಟಾಗ್ರಾಂನಲ್ಲಿ ಪರಿಚಯ ಆಗಿದ್ದ ಯುವಕನನ್ನು ಪ್ರೀತಿ ಮಾಡಿ ಮದುವೆಯಾಗಿದ್ದ ಆ ಯುವತಿಯ ಬದುಕು ದುರಂತವಾಗಿ ಅಂತ್ಯ ಕಂಡಿದೆ.

ಹೌದು ಕೊಪ್ಪಳ (Koppala) ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಗೊಣ್ಣಾಗರ ಗ್ರಾಮದಲ್ಲಿ ಇನ್‌ಸ್ಟಾದಲ್ಲಿ (Instagram) ಪರಿಚಯವಾದ ಯುವಕನೊಂದಿಗೆ ಮದ್ವೆಯಾಗಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ  ಘಟನೆ ನಡೆದಿದೆ. ಪುಷ್ಪವತಿ (23) ಅನುಮಾನಾಸ್ಪದ ಸಾವನ್ನಪ್ಪಿರುವ ಗೃಹಿಣಿಯಾಗಿದ್ದು, ಮೂರು ತಿಂಗಳ ಹಸುಗೂಸು ಇದೆ. 2ನೇ ದಿನಗಳ ಹಿಂದೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು,

ಪತಿ ಕುಟುಂಬಸ್ಥರ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿದೆ. ಮೂಲತಃ ಹಾಸನ ಜಿಲ್ಲೆಯ ಪುಷ್ಪವತಿ ಇನ್‌ಸ್ಟಾದಲ್ಲಿ ಪರಿಚಯವಾಗಿದ್ದ ಮರಿಯಪ್ಪ ಎಂಬಾತನನ್ನ ಪ್ರೀತಿಸಿ ಮದ್ವೆಯಾಗಿದ್ದರು (Marriage). ಇದೀಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗ ಹಿನ್ನೆಲೆ ಪತಿ ಮನೆಯವರೇ ಹೊಡೆದು ನೇಣು ಹಾಕಿರುವುದಾಗಿ ಪುಷ್ಪವತಿ ಕುಟುಂಬಸ್ಥರು ಆರೋಪಿಸಿದ್ದಾರೆ. 2 ದಿನಗಳ ಹಿಂದೆ ಸಾವನ್ನಪ್ಪಿದ್ರು, ಶವ ಇನ್ನು ಅದೇ ಸ್ಥಳದಲ್ಲಿದೆ ಎಂದು ತಿಳಿದುಬಂದಿದೆ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow