ನ್ಯಾಷನಲ್‌ ಕ್ರಷ್‌ʼಗೆ ಕೂಡಿ ಬಂದ ಕಂಕಣ ಭಾಗ್ಯ! ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? 

ಅಕ್ಟೋಬರ್ 4, 2025 - 12:04
 0  11
ನ್ಯಾಷನಲ್‌ ಕ್ರಷ್‌ʼಗೆ ಕೂಡಿ ಬಂದ ಕಂಕಣ ಭಾಗ್ಯ! ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? 

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಪ್ರೀತಿಸುತ್ತಿದ್ದಾರೆ ಎಂಬ ವದಂತಿ ಬಹಳ ದಿನಗಳಿಂದ ಕೇಳಿಬರುತ್ತಿದೆ. ಆದರೆ, ಅವರು ತಮ್ಮ ಪ್ರೇಮ ಸಂಬಂಧದ ಬಗ್ಗೆ ಅಧಿಕೃತವಾಗಿ ಎಂದಿಗೂ ಮಾತನಾಡಿಲ್ಲ. ಆದರೆ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಮತ್ತು ಇಬ್ಬರ ಫೋಟೋಗಳು ವಿಜಯ್-ರಶ್ಮಿಕಾ ಅವರ ಡೇಟಿಂಗ್ ಹಲವು ಬಾರಿ ದೃಢಪಡಿಸಿತ್ತು.

ಇನ್ನೂ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಶುಕ್ರವಾರ (ಅಕ್ಟೋಬರ್ 03) ಬೆಳಿಗ್ಗೆ, ಈ ಪ್ರೇಮ ಪಕ್ಷಿಗಳು ವಿಜಯ್ ದೇವರಕೊಂಡ ಅವರ ಮನೆಯಲ್ಲಿ ಉಂಗುರ ಬದಲಾಯಿಸಿಕೊಂಡರು ಎಂದು ತಿಳಿದು ಬಂದಿದೆ.

ಕೆಲವು ವರದಿಗಳ ಪ್ರಕಾರ ಮನೆಯವರು ಹಾಗೂ ಆಪ್ತರ ಸಮ್ಮುಖದಲ್ಲಿ ರಶ್ಮಿಕಾ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರಂತೆ. ಈ ವಿಷಯವನ್ನು ಗುಟ್ಟಾಗಿ ಇಡುವ ಕಾರಣದಿಂದಲೇ ಎಲ್ಲಿಯೂ ಫೋಟೋ ಲೀಕ್ ಆಗದಂತೆ ನೋಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಇನ್ನು ನಿಶ್ಚಿತಾರ್ಥದ ವೇಳೆ ಮದುವೆ ಡೇಟ್ ಕೂಡ ನಿಗದಿ ಆಗಿದೆ ಎನ್ನಲಾಗುತ್ತಿದೆ.

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿಯಲ್ಲಿ ವಿವಾಹ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಸೆಲೆಬ್ರಿಟಿ ಮದುವೆ ಆದ್ದರಿಂದ ಅದ್ದೂರಿಯಾಗಿ ಇದನ್ನು ನೆರವೇರಿಸಲು ನಿರ್ಧರಿಸಲಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ಈ ವಿವಾಹಕ್ಕೆ ಹಾಜರಿ ಹಾಕುವ ನಿರೀಕ್ಷೆ ಇದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow