ಪತಿಯಿಂದ ಪತ್ನಿಯ ಬರ್ಬರ ಹತ್ಯೆ: ಆರೋಪಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು!

ಎಪ್ರಿಲ್ 5, 2025 - 14:06
 0  10
ಪತಿಯಿಂದ ಪತ್ನಿಯ ಬರ್ಬರ ಹತ್ಯೆ: ಆರೋಪಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು!

ಬೆಂಗಳೂರು:- ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿ ನಗರದಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ ನಡೆದಿರುವ ಘಟನೆ ಜರುಗಿದೆ. ಘಟನೆ ಬಳಿಕ ಎಸ್ಕೇಪ್ ಆಗುತ್ತಿದ್ದ ಪಾಪಿ ಗಂಡನನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. 

ಬಾಗೇಪಲ್ಲಿ ಮೂಲದ ಶಾರದ (35) ಮೃತ ಪತ್ನಿ. ಕೃಷ್ಣ ಪತ್ನಿಯನ್ನು ಕೊಂದ ಪಾಪಿ ಪತಿ. ಅಕ್ರಮ ಸಂಬಂಧ ಹಿನ್ನೆಲೆ ಕೊಲೆ ಶಂಕೆ ವ್ಯಕ್ತವಾಗಿದೆ. ನಡು ರಸ್ತೆಯಲ್ಲಿ ಪತ್ನಿಗೆ ಚಾಕುವಿನಿಂದ ಕುತ್ತಿಗೆ ಕುಯ್ದು ಪತಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗ್ನೇಯ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪತ್ನಿ ಕೆಲಸ ಮುಗಿಸಿ ನಿರ್ಜನ ರಸ್ತೆಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪತಿ ದಾಳಿ ನಡೆಸಿದ್ದಾನೆ. ಆರೋಪಿ ಪತ್ನಿಯನ್ನು ಕೊಲ್ಲಲು ಎರಡು ಚಾಕು ತಂದಿದ್ದ. ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಎಸ್ಕೇಪ್ ಆಗುತ್ತಿದ್ದ ಆರೋಪಿ ಪತಿಯನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ತನಿಖೆಗೆ ಪೊಲೀಸರು ಕೈಗೊಂಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow