ಪದ್ಮವಿಭೂಷಣ ಪುರಸ್ಕೃತ, 'ISRO' ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ಇನ್ನಿಲ್ಲ

ಎಪ್ರಿಲ್ 25, 2025 - 14:09
 0  9
ಪದ್ಮವಿಭೂಷಣ ಪುರಸ್ಕೃತ,  'ISRO' ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ಇನ್ನಿಲ್ಲ

ಬೆಂಗಳೂರು: 1 ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಹಾಗೂ ಪದ್ಮವಿಭೂಷಣ ಪುರಸ್ಕೃತ ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್(84) ವಿಧಿವಶರಾಗಿದ್ದಾರೆ. ಕಸ್ತೂರಿ ರಂಗನ್ ಅವರು ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಎನ್ಐಐಟಿ ವಿಶ್ವವಿದ್ಯಾಲಯಗಳಲ್ಲಿ ಮಾಜಿ ಕುಲಪತಿಯಾಗಿದ್ದರು.

ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ಕುಲಪತಿಯೂ ಹೌದು. ಅವರು ಕರ್ನಾಟಕ ಜ್ಞಾನ ಆಯೋಗದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

1994 ರಿಂದ 2003 ರವರೆಗೆ 9 ವರ್ಷಗಳ ಕಾಲ ಇಸ್ರೋ ಮುಖ್ಯಸ್ಥರಾಗಿದ್ದರು. ನಂತರ, 2003 ರಿಂದ 2009 ರವರೆಗೆ ರಾಜ್ಯಸಭಾ ಸದಸ್ಯರಾಗಿದ್ರು. ಈ ವಿಜ್ಞಾನಿಗೆ ಭಾರತ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪುರಸ್ಕಾರಗಳಾದ ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ಡಾ. ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು ಕೇರಳದ ಎರ್ನಾಕುಲಂನಲ್ಲಿ 24 ಅಕ್ಟೋಬರ್, 1940ರಲ್ಲಿ ಜನಿಸಿದರು. 1994 ರಿಂದ 2003ರವರೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಅಧ್ಯಕ್ಷರಾಗಿದ್ದರು. ಭಾರತೀಯ ಬಾಹ್ಯಾಕಾಶ ವಿಜ್ಞಾನಿಯಾದ ಇವರು,  ಬಳಿಕ ಭಾರತ ಸರ್ಕಾರದ ಯೋಜನಾ ಆಯೋಗದ ಸದಸ್ಯರಾದರು. ಬಳಿಕ ಕಸ್ತೂರಿ ರಂಗನ್ ಸಮಿತಿಯ ಅಧ್ಯಕ್ಷರಾಗಿದ್ರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow