ಪಲ್ಟಿ ಹೊಡೆದ ಸರ್ಕಾರಿ ಬಸ್: ಪ್ರಯಾಣಿಕನ ಕಾಲು ಮುರಿತ, 15 ಮಂದಿಗೆ ಗಾಯ
ರಾಯಚೂರು:- ನಗರದ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು, ಬಸ್‌ನಲ್ಲಿದ್ದ 15 ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಜರುಗಿದೆ.
ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್, ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ. ಬಸ್‌ನಲ್ಲಿ ಕಾಲು ಸಿಲುಕಿ ನೋವಿನಿಂದ ಒದ್ದಾಡಿದ ಪ್ರಯಾಣಿಕ ವಿಶ್ವನಾಥ್‌ನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಟಿ ಜಿಟಿ ಮಳೆಯಲ್ಲೇ ಕ್ರೇನ್ ಮೂಲಕ ಬಸ್ ಮೇಲೆತ್ತಲಾಗಿದ್ದು, ಉಳಿದ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?