ಪಾಕ್ ಜೊತೆ ಯುದ್ಧ ಬೇಡವೆಂದ ಸಿಎಂ ಸಿದ್ದರಾಮಯ್ಯ ಈಗ ಫುಲ್ ಫೇಮಸ್: ಪಾಕಿಸ್ತಾನ ಟಿವಿಯಲ್ಲಿ ಸಿಎಂ ಸುದ್ದಿ!

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terror Attack) ಭಯೋತ್ಪಾದಕರು ನಡೆಸಿದ ದಾಳಿಗೆ ಇಡೀ ಭಾರತ ಬೆಚ್ಚಿಬಿದ್ದಿದೆ. ಉಗ್ರರ ಬೇರನ್ನು ಬುಡಸಮೇತ ಕಿತ್ತು ಹಾಕಬೇಕು ಎಂದು ಸಮಸ್ತ ಭಾರತೀಯರು ಅವುಡುಗಚ್ಚಿ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಮತ್ತೊಂದೆಡೆ ಕೇಂದ್ರದ ಘಟಾಘಟಿ ನಾಯಕರು ಪ್ರತಿಕಾರದ ಮಾತುಗಳನ್ನು ಆಡುತ್ತಿದ್ದಾರೆ.
ಇದರಿಂದ ಯುದ್ಧದ ಕಾರ್ಮೋಡ ಆವರಿಸಿದೆ. ಆದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅನಿವಾರ್ಯತೆ ಇದೆಯಾ ಎಂದು ಮಾದ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಯುದ್ಧ ಮಾಡುವ ಅಗತ್ಯ ಇಲ್ಲ, ಬಿಗಿ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಇದೆ ಎಂದು ಹೇಳಿದ್ದರು.
ಇದೀಗ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಪಾಕಿಸ್ತಾನದ ಟಿವಿಗಳಲ್ಲಿ ಪ್ರಸಾರವಾಗಿದೆ. ಪಾಕ್ ಟಿವಿಗಳಲ್ಲಿ ಸಿಎಂ ಸಿದ್ದರಾಮಯ್ಯ ಬ್ರೇಕಿಂಗ್ ನ್ಯೂಸ್ ಆಗಿರೋದು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ.
ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನ ಪಾಕಿಸ್ತಾನದ ಮಾಧ್ಯಮಗಳು ಪ್ರಸಾರ ಮಾಡಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಬಿಜೆಪಿ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡು ಟೀಕಿಸುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






