ಪಾದಚಾರಿಗೆ ಡಿಕ್ಕಿ ಹೊಡೆದ ಲಾರಿ: ವ್ಯಕ್ತಿ ಸ್ಥಳದಲ್ಲೇ ಸಾವು

ಆಗಸ್ಟ್ 25, 2025 - 14:10
 0  12
ಪಾದಚಾರಿಗೆ ಡಿಕ್ಕಿ ಹೊಡೆದ ಲಾರಿ: ವ್ಯಕ್ತಿ ಸ್ಥಳದಲ್ಲೇ ಸಾವು

ಧಾರವಾಡ: ತಾಲೂಕಿನ ಶಿಂಗನಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಹೂವಿನಹಡಗಲಿಯ ಹೊನ್ನಪ್ಪ (46) ಎಂಬಾತನೇ ಈ ಅಪಘಾತದಲ್ಲಿ ಸಾವನ್ನಪ್ಪಿದ ಪಾದಚಾರಿ. 

ಬೆಳಗಾವಿ ಕಡೆಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಲಾರಿಯು ರಸ್ತೆ ದಾಟುತ್ತಿದ್ದ ಹೊನ್ನಪ್ಪನಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಹೊನ್ನಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 

ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow