ಪಾರ್ಕ್ ಬಿಟ್ಟು ಮೆಟ್ರೋದಲ್ಲಿ ರೋಮ್ಯಾನ್ಸ್ ಶುರು ಮಾಡಿದ ಲವ್ ಬರ್ಡ್ಸ್..! ಇದೆಂಥಾ ಅಸಹ್ಯ ಎಂದ ನೆಟ್ಟಿಗರು!

ಬೆಂಗಳೂರು: ಮೆಟ್ರೋ, ರೈಲು, ಬಸ್ ಇತ್ಯಾದಿ ಸಾರ್ವಜನಿಕರು ಪ್ರಯಾಣಿಸುವಂತಹ ಸ್ಥಳಗಳಲ್ಲಿ ಪ್ರೇಮಿಗಳು ಲೋಕದ ಪರಿವೇ ಇಲ್ಲದೆ ಸರಸವಾಡುತ್ತಾ, ಇತರರಿಗೂ ಮುಜುಗರ ಉಂಟು ಮಾಡಿದ ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಫ್ಲ್ಯಾಟ್ ಫಾರ್ಮ್ -3ಯಲ್ಲಿ ಜೋಡಿಯೊಂದು ರೋಮಾನ್ಸ್ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ.
ಇನ್ನೊಂದೆಡೆ ಇದು ಮಾದಾವರ ಮೆಟ್ರೋ ನಿಲ್ದಾಣದಲ್ಲಿ ನಡೆದಿರುವ ಘಟನೆ ಎನ್ನಲಾಗಿದೆ. ಕರ್ನಾಟಕ ಪೋರ್ಟ್‌ಫೋಲಿಯೋ ಎನ್ನುವ ಎಕ್ಸ್ ಹ್ಯಾಂಡಲ್‌ನಲ್ಲಿ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ‘‘ಬೆಂಗಳೂರು ಮೆಟ್ರೋ ಕೂಡ ದೆಹಲಿ ಮೆಟ್ರೋ ಸಂಸ್ಕೃತಿಯತ್ತ ಸಾಗುತ್ತಿದೆಯೇ?’’ ಎಂದು ಪ್ರಶ್ನಿಸಿ ಪೋಸ್ಟ್ ಮಾಡಲಾಗಿರುವ ಈ ವಿಡಿಯೋಗೆ (Viral Video) ಈಗ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದೆ. ಇನ್ನು ಈ ವಿಡಿಯೋ ಬಗ್ಗೆ ಬೆಂಗಳೂರು ಮೆಟ್ರೋ ಅಧಿಕಾರಿಗಳಾಗಲಿ, ಪೊಲೀಸರಾಗಲಿ ಯಾವುದೇ ಹೇಳಿಕೆ ನೀಡಿಲ್ಲ.
https://x.com/karnatakaportf/status/1910385125482758651?ref_src=twsrc%5Etfw%7Ctwcamp%5Etweetembed%7Ctwterm%5E1910385125482758651%7Ctwgr%5E25af186768397311c4b1bea5f7100eb04b2563f0%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fbengaluru%2Fcouples-indecent-romance-video-in-namma-metro-station-goes-viral-is-bengaluru-heading-towards-delhi-metro-culture-1005531.html
‘ಕರ್ನಾಟಕ ಪೋರ್ಟ್‌ಫೋಲಿಯೋ’ ಎಕ್ಸ್ ಹ್ಯಾಂಡಲ್ ಸಂದೇಶದಲ್ಲಿ, ಜೋಡಿಯ ವರ್ತನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ ಬೆಂಗಳೂರು ಕೂಡ ದೆಹಲಿ ಮೆಟ್ರೋ ಸಂಸ್ಕೃತಿಯತ್ತ ಸಾಗುತ್ತಿದೆಯೇ? ನಮ್ಮ ಮೆಟ್ರೋ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಮುಜುಗರ ಉಂಟುಮಾಡುವ ಸನ್ನಿವೇಶ ಸೃಷ್ಟಿಯಾಯಿತು ಎಂದು ಉಲ್ಲೇಖಿಸಲಾಗಿದೆ. ಯುವ ಜೋಡಿಯೊಂದು ಅಕ್ಕಪಕ್ಕ ಮಹಿಳೆಯರು, ಹಿರಿಯರಿದ್ದರೂ ಕ್ಯಾರೇ ಎನ್ನದೆ ಅಸಭ್ಯವಾಗಿ ವರ್ತಿಸಿರುವುದು ವಿಡಿಯೋದಲ್ಲಿದೆ. ಸುಮಾರು 1 ನಿಮಿಷ 30 ಸೆಕಂಡ್ನ ವಿಡಿಯೋ ಈಗ ವೈರಲ್ ಆಗುತ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?






