“ಪುಷ್ಪ-2” ಚಿತ್ರದ ಸಕ್ಸಸ್ ಸಂಭ್ರಮದಲ್ಲಿದ್ದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅರೆಸ್ಟ್.!

ಹೈದರಾಬಾದ್ : ತೆಲುಗು ನಟ ಅಲ್ಲು ಅರ್ಜುನ್ ಅವರು ತಮ್ಮ ‘ಪುಷ್ಪ 2: ದಿ ರೂಲ್’ ಚಿತ್ರದ ಪ್ರೀಮಿಯರ್ ಶೋಗೆ ಆಗಮಿಸಿದಾಗ ಹೈದರಾಬಾದ್ ಚಿತ್ರಮಂದಿರದ ಹೊರಗೆ ಉಂಟಾದ ಕಾಲ್ತುಳಿತ ಉಂಟಾಗಿದೆ. ಇನ್ನು ದುರ್ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಸಧ್ಯ ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸ್ಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.
ಈಗಾಗಲೇ ಇದೇ ಪ್ರಕರಣದಲ್ಲಿ ಸಂಧ್ಯಾ ಚಿತ್ರಮಂದಿರದ ಮಾಲೀಕ, ಚಿತ್ರಮಂದಿರದ ಮ್ಯಾನೇಜರ್ ಹಾಗೂ ಕಾಲ್ತುಳಿತ ನಡೆದ ದಿನ ಅಲ್ಲು ಅರ್ಜುನ್ ಜೊತೆಗೆ ಇದ್ದ ಕೆಲವು ಬೌನ್ಸರ್ಗಳನ್ನು ಸಹ ಈಗಾಗಲೇ ಬಂಧಿಸಲಾಗಿದೆ. ಅಲ್ಲು ಅರ್ಜುನ್ ವಿರುದ್ಧ 105, 118 (5) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಅಲ್ಲು ಅರ್ಜುನ್ ಮನೆಗೆ ಹೋಗಿ, ಅವರ ಬೆಡ್ರೂಂ ಬಳಿಗೆ ಹೋಗಿ ಅಲ್ಲು ಅರ್ಜುನ್ ಅನ್ನು ಕರೆತರಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






