ಪೋಕ್ಸೋ ಕೇಸ್: ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಕೋರ್ಟ್..!

ಮಾರ್ಚ್ 14, 2025 - 14:02
 0  18
ಪೋಕ್ಸೋ ಕೇಸ್: ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಕೋರ್ಟ್..!

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್​ ಸಿಕ್ಕಿದೆ. ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಬಿಎಸ್​ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.

 ಪೋಕ್ಸೋ ಪ್ರಕರಣದ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್‌ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್, ಯಡಿಯೂರಪ್ಪ ಅವರ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಪರಿಗಣಿಸಿ ಈ ಆದೇಶ ಹೊರಡಿಸಿದೆ. ಇದರಿಂದ ಬಿಎಸ್​ ಯಡಿಯೂರಪ್ಪಗೆ ಬಿಗ್​ ರಿಲೀಫ್​ ಸಿಕ್ಕಿದೆ.

ಹೌದು ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ. 

ವಾದ-ಪ್ರತಿವಾದ ಆಲಿಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ, ಬಿಎಸ್ ಯಡಿಯೂರಪ್ಪ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಹಾಗೇ, ಖುದ್ದು ಹಾಜರಾತಿಯಿಂದಲೂ ಬಿಎಸ್ ಯಡಿಯೂರಪ್ಪ ಅವರಿಗೆ ವಿನಾಯಿತಿ ನೀಡಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow