ಪೋಷಕರಿಗೆ ಗುಡ್ ನ್ಯೂಸ್: 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಗೊಳಿಸಿದ ಶಿಕ್ಷಣ ಇಲಾಖೆ..!

ಬೆಂಗಳೂರು: ಒಂದನೇ ತರಗತಿ ಮತ್ತು ಎಲ್ಕೆಜಿಗೆ ಕಡ್ಡಾಯ ವಯೋಮಿತಿ ನಿಗದಿಪಡಿಸಿರುವ ಸರ್ಕಾರದ ಕ್ರಮಕ್ಕೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಹೊಸ ನಿಯಮ ಅವೈಜ್ಞಾನಿಕ ಮತ್ತು ಅನ್ಯಾಯ ಎಂದು ಪೋಷಕರು ಕಿಡಿ ಕಾರಿದ್ದರು. ಇದೀಗ ಶಾಲಾ ವಯೋಮಿತಿಯನ್ನ ಶಿಕ್ಷಣ ಇಲಾಖೆ ಸಡಿಲಗೊಳಿಸಿದೆ.
ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿ ಬಗ್ಗೆ ಮಾತನಾಡಿದ ಅವರು, ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದರು.
ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಎಲ್ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
ವಯಸ್ಸಿನ ಮಿತಿಯ ಬಗ್ಗೆ ಎಲ್ಲರೂ ಒತ್ತಡ ಹೇರುತ್ತಾ ಇದ್ದರು. ಈ ವಿಚಾರದಲ್ಲಿ ಪೋಷಕರಿಗೆ ಒಂದು ಮನವಿಯನ್ನು ಮಾಡುತ್ತಿದ್ದೇನೆ. ಮಕ್ಕಳನ್ನು ಯಂತ್ರದ ತರ ಓದಿಸಬೇಡಿ. ಹಾಗೆ ಮಾಡಿದರೆ ಮಕ್ಕಳಲ್ಲಿ ಒತ್ತಡ ಹೆಚ್ಚಾಗುತ್ತದೆ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






