ಪೌರ ಕಾರ್ಮಿಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ತಿಂಗಳ ಸಂಬಳ ಎಷ್ಟು ಗೊತ್ತಾ!?

ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಪೌರಕಾರ್ಮಿಕರ ಚಿತ್ರದುರ್ಗ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈಗಾಗಲೇ ಪೌರ ಕಾರ್ಮಿಕರಾಗಿ ನೇಮಕಾತಿ ಹೊಂದಿ ಕರ್ತವ್ಯ ನಿರ್ವಹಿಸುತ್ತಿರುವವರು ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಹುದ್ದೆ ವಿವರ: ಒಟ್ಟು 26 ಪೌರ ಕಾರ್ಮಿಕರ ನೇರ ನೇಮಕಾತಿಎಲ್ಲಿ ಎಷ್ಟು ಹುದ್ದೆ:
ಚಿತ್ರದುರ್ಗ ನಗರಸಭೆ - 8ಹಿರಿಯೂರು ನಗರಸಭೆ - 6ಹೊಸದುರ್ಗ ಪುರಸಭೆ - 3ಹೊಳಲ್ಕೆರೆ ಪುರಸಭೆ - 3ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ - 3ನಾಯಕನಹಟ್ಟಿ ಪಟ್ಟಣ ಪಂಚಾಯಿತಿ - 3
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಅವಶ್ಯಕತೆ ಇಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು.ವೇತನ: ಮಾಸಿಕ 27,000 ದಿಂದ 46,675 ರೂ ವರೆಗೆ
ಅರ್ಜಿ ಸಲ್ಲಿಕೆ: ಆಯಾ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳಿಂದ ಅರ್ಜಿ ಪಡೆದು ಅಗತ್ಯ ದಾಖಲಾತಿ ಮತ್ತು ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಕೆ ಮಾಡಬೇಕು.ಅರ್ಜಿ ಸಲ್ಲಿಸುವ ವಿಳಾಸ: ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಚಿತ್ರದುರ್ಗ.ಈ ಹುದ್ದೆಗೆ ನವೆಂಬರ್ 6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಡಿಸೆಂಬರ್ 5 ಆಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






