ಪ್ರಜ್ವಲ್ ರೇವಣ್ಣಗೆ ಇಂದು ಮಹತ್ವದ ದಿನ: ಕೋರ್ಟ್ ತೀರ್ಪಿನ ಮೇಲೆ ನಿಂತಿದೆ ರಾಜಕಾರಣಿ ಭವಿಷ್ಯ

ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದೆ.
ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಜ್ವಲ್ ರೇವಣ್ಣ ಮೇಲಿದೆ. ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದು, ಈಗಾಗಲೇ ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಜಾಮೀನು ಸಿಕ್ಕಿದೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಮಾತ್ರ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ.
ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಒಂದು ವೇಳೆ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆ ಇದೆ.
ನಿಮ್ಮ ಪ್ರತಿಕ್ರಿಯೆ ಏನು?






