ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಸಹೋದರ ಸೂರಜ್ ರೇವಣ್ಣ ಹೇಳಿದ್ದೇನು..?

ಹಾಸನ: ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಆಗಸ್ಟ್ 2 ರಂದು ಜೀವಾವಧಿ ಶಿಕ್ಷೆ ವಿಧಿಸಿದೆ. ಸದ್ಯ ಈ ಸಂಬಂಧ ಮಾತನಾಡಿದ ಪ್ರಜ್ವಲ್ ಸಹೋದರ ಹಾಗೂ ಎಂಎಲ್‌ಸಿ ಸೂರಜ್ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೂರಜ್ ಅವರು,
ಅದು ವರ್ಡಿಕ್ಟ್ ವಾರ್‌ಗೆ ಬಂದಿದೆ. ಮೇಲ್ಮನವಿ ಮಾಡ್ತಿವಿ. ಅದನ್ನು ಬಿಟ್ಟು ಪ್ರತಿಕ್ರಿಯೆ ಕೊಡುವಂತಹ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿದೆ.
ನಾವ್ಯಾರೂ ಚರ್ಚೆ ಮಾಡುವುದು ಸೂಕ್ತವಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಕೆ.ಆರ್.ನಗರ ಮೂಲದ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಅಪರಾಧಿಗೆ ಈಚೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಘೋಷಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






