ಪ್ರತಿಪಕ್ಷಗಳಿಗೆ ಉತ್ತರ ನೀಡಲು ಹಾಸನ ಸಮಾವೇಶ: ಸಚಿವ ಡಾ. ಜಿ ಪರಮೇಶ್ವರ್

ಡಿಸೆಂಬರ್ 5, 2024 - 12:08
 0  10
ಪ್ರತಿಪಕ್ಷಗಳಿಗೆ ಉತ್ತರ ನೀಡಲು ಹಾಸನ ಸಮಾವೇಶ: ಸಚಿವ ಡಾ. ಜಿ ಪರಮೇಶ್ವರ್

ಬೆಂಗಳೂರು: ಪ್ರತಿಪಕ್ಷಗಳಿಗೆ ಉತ್ತರ ನೀಡಲು ಹಾಸನ ಸಮಾವೇಶ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಹಾಸನದಲ್ಲಿ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶ ವಿಚಾರವಾಗಿ ಮಾತನಾಡಿದ ಅವರು, ಜನ ಸ್ವಾಭಿಮಾನಿ ಒಕ್ಕೂಟಗಳನ್ನು ಮಾಡಿಕೊಂಡಿದ್ದಾರೆ. ಅವರು ನಮ್ಮ ಪಕ್ಷಕ್ಕೆ, ಸರ್ಕಾರಕ್ಕೆ ಸಿಂಪಥೈಸರ್ಸ್. ಅವರೊಂದಿಗೆ ಪಕ್ಷವೂ ಸೇರಿದೆ. ಎಲ್ಲ ಒಟ್ಟಿಗೆ ಸೇರಿ ಸಮಾವೇಶ ಮಾಡುತ್ತಿದ್ದೇವೆ.

ಚುನಾವಣೆ ಸಂಧರ್ಭದಲ್ಲಿ ರಾಜಕೀಯವಾಗಿ ಮಾತಾಡಿದ್ದೆವು, ಅದನ್ನು ಜನರಿಗೆ ಹೇಳಬೇಕು. ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ವಿಚಾರ ಪ್ರಸ್ತಾಪ ಮಾಡಲು ಆಗಲ್ಲ. ಜನರಿಗೆ ಸತ್ಯಾಂಶವನ್ನು ತಿಳಿಸಬೇಕು. ವಿಪಕ್ಷಕ್ಕೆ ರಾಜಕೀಯವಾಗಿ ಉತ್ತರ ಕೊಡಬೇಕು. ರಾಜಕೀಯವಾಗಿ ಉತ್ತರ ಕೊಡಲು ಸಮಾವೇಶ ಮಾಡುತ್ತಿದ್ದೇವೆ ಎಂದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow