ಪ್ರಧಾನಿ ಮೋದಿ ಸೇವೆ ದೇಶಕ್ಕೆ ಬೇಕು, ಅವರು ನಿವೃತ್ತಿಯಾಗಲ್ಲ : ಸಚಿವ ಸೋಮಣ್ಣ

ಸೆಪ್ಟೆಂಬರ್ 17, 2025 - 16:07
 0  14
ಪ್ರಧಾನಿ ಮೋದಿ ಸೇವೆ ದೇಶಕ್ಕೆ ಬೇಕು, ಅವರು ನಿವೃತ್ತಿಯಾಗಲ್ಲ : ಸಚಿವ ಸೋಮಣ್ಣ

ತುಮಕೂರು:- ಮೋದಿ ಸೇವೆ ದೇಶಕ್ಕೆ ಬೇಕು, ಅವರು ನಿವೃತ್ತಿಯಾಗಲ್ಲ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬವನ್ನು ತುಮಕೂರಿನಲ್ಲಿ ಆಚರಣೆ ಮಾಡಿ ಮಾತನಾಡಿದರು. ಪ್ರಧಾನಿ ಮೋದಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡಿಸಿದ್ದಾರೆ. ಮೋದಿ ಅವರ ನಾಯಕತ್ವ ಇಡೀ ವಿಶ್ವ ಒಪ್ಪಿಕೊಳ್ಳುತ್ತಿದೆ.

ಕಳೆದ 11 ವರ್ಷದಲ್ಲಿ ಭಾರತ ಹಿಂದೆಂದೂ ಕಂಡಿರದಂತಹ ಅಭಿವೃದ್ಧಿ ಕಂಡಿದೆ ಎಂದರು. ಇದೇ ವೇಳೆ ಮೋದಿ ಅವರ ನಿವೃತ್ತಿ ಬಗ್ಗೆ ಮಾತನಾಡಿ, ಈಗಾಗಲೇ ಆರ್‌ಎಸ್‌ಎಸ್ ಮುಖ್ಯಸ್ಥರು ಅದರ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಮೋದಿ ಅವರ ಸೇವೆ ಇನ್ನೂ ದೇಶಕ್ಕೆ ಬೇಕು ಎಂದು ತಿಳಿಸಿದರು

ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬವನ್ನು ತುಮಕೂರಿನಲ್ಲಿ  ಇಂದು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಮೋದಿ ಹುಟ್ಟುಹಬ್ಬ ಹಿನ್ನೆಲೆ  ಸೋಮಣ್ಣರ ನೇತೃತ್ವದಲ್ಲಿ ಪ್ರವಾಸಿ ಮಂದಿರದ ಅವರ ಕಚೇರಿ ಆವರಣದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು

ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿತ್ತು. ಸ್ವತಃ ಸಚಿವ ಸೋಮಣ್ಣ ಬಿ.ಪಿ. ಹಾಗೂ ಶುಗರ್ ಚೆಕ್ ಮಾಡಿಸಿಕೊಂಡರು. ಅದಕ್ಕೂ ಮುನ್ನ ಕ್ಯಾತಸಂದ್ರದ ಸರ್ಕಾರಿ ಮಾದರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಿದರು

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow