ಪ್ರಮಾಣ ವಚನ ಸ್ವೀಕಾರ ಮಾಡಿದ ನೂತನ ಸಿಜೆಐ ನ್ಯಾಯಮೂರ್ತಿ ಸಂಜೀವ್ ಖನ್ನಾ!

ನವೆಂಬರ್ 11, 2024 - 12:25
 0  10
ಪ್ರಮಾಣ ವಚನ ಸ್ವೀಕಾರ ಮಾಡಿದ ನೂತನ ಸಿಜೆಐ ನ್ಯಾಯಮೂರ್ತಿ ಸಂಜೀವ್ ಖನ್ನಾ!

ನವದೆಹಲಿನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರು 51 ನೇ ಸಿಜೆಐ ಆಗಿದ್ದು, ಸುಮಾರು 6 ತಿಂಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ, ಅವರು 370 ನೇ ವಿಧಿ ರದ್ಧತಿ, ವ್ಯಭಿಚಾರದ ಅಪರಾಧೀಕರಣ, ಚುನಾವಣಾ ಬಾಂಡ್ಗಳ ಯೋಜನೆ, ಇವಿಎಂ-ವಿವಿಪ್ಯಾಟ್ ಟ್ಯಾಲಿ ಇತ್ಯಾದಿಗಳ ಮಹತ್ವದ ತೀರ್ಪುಗಳ ಭಾಗವಾಗಿದ್ದಾರೆ. ಹಾಲಿ ಸಿಜೆಐ ಡಿ.ವೈ. ಚಂದ್ರಚೂಡ್ ಅವರು ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಕಳೆದ ತಿಂಗಳು ಶಿಫಾರಸ್ಸು ಮಾಡಿದ ನಂತರ ಅಕ್ಟೋಬರ್ 24 ರಂದು ಕೇಂದ್ರ ಸರ್ಕಾರ ಅವರನ್ನು ಅತ್ಯುನ್ನತ ನ್ಯಾಯಾಂಗ ಕಚೇರಿಗೆ ನೇಮಕ ಮಾಡಿತ್ತು.

ನಿರ್ಗಮಿತ ನ್ಯಾಯಮೂರ್ತಿಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್ ಖನ್ನಾ ಏರುತ್ತಿದ್ದು, ಮೇ. 13, 2025 ರವರೆಗೆ ಅಧಿಕಾರದಲ್ಲಿ ಇರಲಿದ್ದಾರೆ. ನ್ಯಾ. ಖನ್ನಾ ಅವರ ತಂದೆ ದೇವ್ರಾಜ್ ಖನ್ನಾ ಕೂಡ ದೆಹಲಿ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿಯಾಗಿದ್ದರು. 2004 ರಲ್ಲಿ ದೆಹಲಿ ಸರ್ಕಾರದ ಸ್ಥಾಯಿ ಸಲಹೆಗಾರರಾಗಿ (ಸಿವಿಲ್) ನೇಮಕಗೊಂಡಿದ್ದ ಅವರು, ದೆಹಲಿ ಹೈಕೋರ್ಟ್ನಲ್ಲಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಮತ್ತು ಅಮಿಕಸ್ ಕ್ಯೂರಿ ಆಗಿ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಹಾಜರಾಗಿ, ವಾದಿಸಿದ್ದಾರೆ. ಅವರ ಚಿಕ್ಕಪ್ಪ ಎಚ್.ಆರ್.ಖನ್ನಾ ಸುಪ್ರೀಂಕೋರ್ಟ್ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow