ಪ್ರವಾಸಕ್ಕೆ ಹೋದ ಕಾಲೇಜು ಹೆಣ್ಣು ಮಕ್ಕಳಿಗೆ ಕಿರುಕುಳ: ಬಿಯರ್ ಕುಡಿಸಿ ಡ್ಯಾನ್ಸ್ ಮಾಡುವಂತೆ ಉಪನ್ಯಾಸಕರ ಒತ್ತಾಯ! 

ಅಕ್ಟೋಬರ್ 18, 2024 - 17:13
 0  31
ಪ್ರವಾಸಕ್ಕೆ ಹೋದ ಕಾಲೇಜು ಹೆಣ್ಣು ಮಕ್ಕಳಿಗೆ ಕಿರುಕುಳ: ಬಿಯರ್ ಕುಡಿಸಿ ಡ್ಯಾನ್ಸ್ ಮಾಡುವಂತೆ ಉಪನ್ಯಾಸಕರ ಒತ್ತಾಯ! 

 ಕಾಲೇಜು, ಸ್ಕೂಲ್ ಅಂದಮೇಲೆ ಟ್ರಿಪ್ ಗೆ ಹೋಗೋದು ಕಾಮನ್. ಶಿಕ್ಷಕರನ್ನು ನಂಬಿ ಪೋಷಕರು ತಮ್ಮ ಮಕ್ಕಳನ್ನು ಕಳಿಸ್ತಾರೆ. ಆದರೆ ಬುದ್ದಿ ಹೇಳಬೇಕಾದ ಗುರುಗಳೇ ತಪ್ಪು ಮಾಡಿದ್ರೆ ಶಿಕ್ಷೆ ಕೊಡೋದು ಯಾರಿಗೆ ಎಂಬ ಪ್ರಶ್ನೆ ಬರದೇ ಇರದು. ಯಾಕೆ ಈ ರೀತಿ ಹೇಳ್ತಿದ್ದೀವಿ ಅಂತ ಯೋಚ್ನೆ ಮಾಡ್ತಿದ್ದೀರಾ!? ಹಾಗಿದ್ರೆ ಈ ಸುದ್ದಿ ನೋಡಿ. 

ಎಸ್, ಟ್ರಿಪ್ ಗೆ ಹೋದ ಕಾಲೇಜು ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ ಉಪನ್ಯಾಸಕರು ಕಿರುಕುಳ ಕೊಟ್ಟಿರುವ ಘಟನೆ ನಡೆದಿದೆ. 

ಘಟನೆ ಸಂಬಂಧ ಕನಕಪುರ ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶಿಸಿದೆ. 

ಉಪನ್ಯಾಸಕರಾದ ವಿಶ್ವನಾಥ್, ಲಕ್ಷ್ಮೀಶ್, ನಾಗೇಶ್ ವಿರುದ್ಧ ದಾಖಲಾಗಿದೆ. ಅಕ್ಟೋಬರ್ 09 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 

ಕನಕಪುರ ಪಟ್ಟಣದ ರೂರಲ್‌ ಪದವಿ ಪೂರ್ವ ಕಾಲೇಜಿನಿಂದ ಅಕ್ಟೋಬರ್ 5 ರಿಂದ 10ರವರೆಗೆ ಮಡಿಕೇರಿ ಪ್ರವಾಸ ಆಯೋಜಿಸಲಾಗಿತ್ತು. ಪ್ರವಾಸದಲ್ಲಿ ಪ್ರಾಂಶುಪಾಲರು ಬಿಯರ್ ಕುಡಿದಿದ್ದಾರೆ. ಬಳಿಕ ಮೂವರು ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿ ಕೂಡಿಹಾಕಿ ಬಲವಂತವಾಗಿ ಬಿಯರ್ ಕುಡಿಸಿದ್ದಾರೆ. ಅಲ್ಲದೇ, ತಮ್ಮ ಜೊತೆ ಡ್ಯಾನ್ಸ್ ಮಾಡುವಂತೆ ಬಲವಂತ ಮಾಡಿದ್ದಾರೆ.

ಪ್ರವಾಸದಿಂದ ಕಾಲೇಜಿಗೆ ಬಂದ ಬಳಿಕ ವಿದ್ಯಾರ್ಥಿನಿಯರು ನಡೆದ ಘಟನೆ ಬಗ್ಗೆ ಮಹಿಳಾ ಉಪನ್ಯಾಸಕರಿಗೆ ಹೇಳಿದ್ದಾರೆ. ಅದಕ್ಕೆ ಮಹಿಳಾ ಉಪನ್ಯಾಸಕಿಯರು “ಕಾಲೇಜು ಅಂದಮೇಲೆ ಇದು ಕಾಮನ್” ಎಂದಿದ್ದಾರೆ. ಆದರೆ, ಈ ವಿಚಾರ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗಕ್ಕೆ ತಿಳಿದಿದೆ.

ವಿಚಾರ ತಿಳಿದ ಕೂಡಲೇ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗ, ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದು ಉಪನ್ಯಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow