ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಸಚಿವನ ಮನೆಗೆ ಬಿಗಿ ಪೊಲೀಸ್ ಭದ್ರತೆ

ಜನವರಿ 4, 2025 - 12:03
ಜನವರಿ 4, 2025 - 12:03
 0  12
ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಸಚಿವನ ಮನೆಗೆ ಬಿಗಿ ಪೊಲೀಸ್ ಭದ್ರತೆ

ಕಲುಬರಗಿ: ಬೀದರ್ ಮೂಲದ ಕಾಂಟ್ರಾಕ್ಟರ್ ಸಚಿನ್ ಪಂಚಾಳ್ ಸುಸೈಡ್ ಪ್ರಕರಣದಲ್ಲಿ ಸಚಿವ ಪ್ರೀಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಕಲಬುರಗಿಯ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ಮುತ್ತಿಗೆ, ಹಾಗೂ ಪ್ರತಿಭಟನೆ ನಡೆಸಲು ಸಜ್ಜಾಗಿದೆ. ಇವತ್ತು ಕಲಬುರಗಿಯಲ್ಲಿ ಬಿಜೆಪಿ ನಾಯಕರು ದೊಡ್ಡಮಟ್ಟದ ಪ್ರತಿಭಟನೆ ನಡೆಸುತ್ತಿದ್ದು

 ಐವಾನ್-ಇ-ಶಾಹಿ ಪ್ರದೇಶದಲ್ಲಿರುವ ಖರ್ಗೆ ಮನೆಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪ್ರತಿಭಟನೆಯಿಂದಾಗಿ ನಗರದ ಜಗತ್ ಸರ್ಕಲ್ ನಿಂದ ಎಸ್​ವಿಪಿ ಸರ್ಕಲ್ ವರೆಗಿನ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಂಚಾರ ನಿಷೇಧ ಜಾರಿಯಲ್ಲಿರುತ್ತದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow