ಪ್ರೀತಿ ಒಪ್ಪದಿದ್ದಕ್ಕೆ ಅಪ್ರಾಪ್ತ ಬಾಲಕಿಯ ಕೊಲೆ..! ಶವ ಹೂಳುವಾಗ ಸಿಕ್ಕಿಬಿದ್ದ ಯುವಕ ಅರೆಸ್ಟ್!

ಆಗಸ್ಟ್ 29, 2025 - 22:01
 0  14
ಪ್ರೀತಿ ಒಪ್ಪದಿದ್ದಕ್ಕೆ ಅಪ್ರಾಪ್ತ ಬಾಲಕಿಯ ಕೊಲೆ..! ಶವ ಹೂಳುವಾಗ ಸಿಕ್ಕಿಬಿದ್ದ ಯುವಕ ಅರೆಸ್ಟ್!

ಬಾಗ್‌ಪತ್ ಜಿಲ್ಲೆಯ ಬೌಧಾ ಗ್ರಾಮದಲ್ಲಿ ಭೀಕರ ಘಟನೆ ನಡೆದಿದೆ. ಪ್ರೀತಿ ಒಪ್ಪದ ಕಾರಣ ಸಮುನ್ ಎಂಬ ಯುವಕ 14 ವರ್ಷದ ಬಾಲಕಿಯ ಮೇಲೆ ಕಬ್ಬಿಣದ ರಾಡ್ ಬಳಸಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ನಂತರ ಶವವನ್ನು ಮನೆಯಲ್ಲಿ ಹೂತುವಾಗ ಸಿಕ್ಕಿಬಿದ್ದಿದ್ದಾನೆ. ಘಟನೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಸಮುನ್ ಹುಡುಗಿಯನ್ನು ಪ್ರೀತಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ, ಆಕೆ ಪ್ರೀತಿಯನ್ನು ಒಪ್ಪಿಕೊಳ್ಳದ ಕಾರಣ ಕೋಪದಲ್ಲಿ ಕೊಲೆ ಮಾಡಿದ್ದಾಗಿ ತಿಳಿಸಿದ್ದಾನೆ. ಆರೋಪಿ ಬಾಲಕಿಯೊಂದಿಗೆ ದೈಹಿಕ ಸಂಬಂಧ ಹೊಂದಲು ಬಯಸಿದ್ದ, ಅದಕ್ಕೆ ಆಕೆ ನಿರಾಕರಿಸಿದ್ದಳು, ಇದರಿಂದ ಆಕೆಯ ಮೇಲೆ ಕೋಪಗೊಂಡು ಕೊಲೆ ಮಾಡಿದ್ದಾನೆ.

ಸಮುನ್ ಬಾಲಕಿಯ ಶವವನ್ನು ಮನೆಯಲ್ಲಿ ಹೂಳುತ್ತಿದ್ದಾಗ ಆಕೆಯ ಕುಟುಂಬ ಸದಸ್ಯರು ಸ್ಥಳಕ್ಕೆ ಬಂದಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ. ಅವರು ಪೊಲೀಸರಿಗೆ ಮಾಹಿತಿ ನೀಡಿದರು ಮತ್ತು ಆರೋಪಿಯನ್ನು ಬಂಧಿಸಲಾಯಿತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow