ಫಲಿಸಲಿಲ್ಲ ಚಿಕಿತ್ಸೆ: ಯುವ ನಟ ಸಂತೋಷ್ ಬಾಲರಾಜ್ ನಿಧನ!

ಕನ್ನಡ ಚಿತ್ರರಂಗದ ಯುವ ನಟ ಸಂತೋಷ್ ಬಾಲರಾಜ್ (34) ಇಂದು ಬೆಳಿಗ್ಗೆ 9.30ರ ವೇಳೆಗೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು.
ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರರಾದ ಸಂತೋಷ್ ಬಾಲರಾಜ್, ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಅವರಿಗೆ ಸ್ವಲ್ಪಮಟ್ಟಿಗೆ ಗುಣಮುಖತೆಯಾದರೂ, ಬಳಿಕ ಮತ್ತೊಮ್ಮೆ ಅಸ್ವಸ್ಥಗೊಂಡು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು.
ಈ ಬಾರಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಜಾಂಡೀಸ್ ಮೈಯೆಲ್ಲ ಹರಡಿದ ಕಾರಣದಿಂದ ಗಂಭೀರ ಸ್ಥಿತಿಗೆ ತಲುಪಿದ್ದರು. ಚಿಕಿತ್ಸೆ ಫಲಕಾರಿಯಾಗದೇ, ವಿಧಿವಶರಾಗಿದ್ದಾರೆ.
ಸಂತೋಷ್ ಬಾಲರಾಜ್ ಅವರು ‘ಕರಿಯಾ-2’, ‘ಕೆಂಪ’, ‘ಗಣಪ’, ‘ಬರ್ಕ್ಲಿ’, ‘ಸತ್ಯ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಾಯಕನಾಗಿ ಅಭಿನಯಿಸಿದ್ದರು. ಯುವ ವಯಸ್ಸಿನಲ್ಲೇ ಅವರ ಅಗಲಿಕೆ ಚಿತ್ರರಂಗಕ್ಕೆ ಭಾರೀ ನಷ್ಟವಾಗಿದ್ದು, ಕಲಾವಿದರು, ನಿರ್ಮಾಪಕರು ಹಾಗೂ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






