ಫೈನಲ್ ನಲ್ಲೇ ಆರ್ ಸಿಬಿಗೆ ಆಘಾತ: ಓಪನರ್ ಸಾಲ್ಟ್ ಆಡೋದು ಡೌಟ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2025ರ ಐಪಿಎಲ್ ನಲ್ಲಿ ತನ್ನ ಅಮೋಘ ಆಟದ ಮೂಲಕ ಫೈನಲ್ ತಲುಪಿದೆ. ಅದರಂತೆ ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.
ಫೈನಲ್ ಪಂದ್ಯಕ್ಕೂ ಮುನ್ನ ಆರ್‌ಸಿಬಿಯ ಅಭ್ಯಾಸ ವೇಳೆ ಸಾಲ್ಟ್ ಕಾಣಿಸಿಲ್ಲ ಎಂದು ವರದಿಯಾಗಿದೆ. ಇಂಗ್ಲೆಂಡಿನ ಫಿಲ್ ಸಾಲ್ಟ್ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಹೀಗಾಗಿ ಅವರು ತವರಿಗೆ ತೆರಳಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ ಇಲ್ಲಿಯವರೆಗೆ ಆರ್‌ಸಿಬಿ ಅಧಿಕೃತವಾಗಿ ಸಾಲ್ಟ್ ಅಲಭ್ಯರಾಗುವ ಬಗ್ಗೆ ತಿಳಿಸಿಲ್ಲ.
ಆರ್‌ಸಿಬಿ ಪರ 12 ಪಂದ್ಯ ಆಡಿರುವ ಸಾಲ್ಟ್ ಒಟ್ಟು 387 ರನ್ ಹೊಡೆದು ಟಾಪ್ 20 ಬ್ಯಾಟರ್ ಪಟ್ಟಿಯಲ್ಲಿ 20ನೇ ಸ್ಥಾನದಲ್ಲಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






