ಫ್ಯಾನ್ಸ್ ಗೆ ಗುಡ್ ನ್ಯೂಸ್: RCB ಈ ಬಾರಿ ಉಳಿಸಿಕೊಳ್ಳೋ ಆಟಗಾರರು ಇವರೇ ನೋಡಿ!

ಐಪಿಎಲ್ ರಿಟೈನ್ ಡೆಡ್ಲೈನ್ ಹತ್ತಿರವಾದಂತೆ ಫ್ರಾಂಚೈಸಿಗಳ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಯಾರನ್ನ ರಿಲೀಸ್ ಮಾಡಬೇಕು, ಯಾರನ್ನ ರಿಟೈನ್ ಮಾಡಿಕೊಳ್ಳಬೇಕು ಎಂಬ ಲೆಕ್ಕಾಚಾರ ಜೋರಾಗಿ ನಡೀತಿದೆ. ದಿನಕ್ಕೊಂದು ದೊಡ್ಡ ದೊಡ್ಡ ಸುದ್ದಿಗಳು ಹೊರ ಬೀಳುತ್ತಿವೆ.
ಇದೀಗ 2025 ರ IPL ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತವಾಗಿದೆ. ಈ ಪಟ್ಟಿಯಲ್ಲಿ ಇದೀಗ ಮೂವರು ಆಟಗಾರರ ಹೆಸರು ಕಾಣಿಸಿಕೊಂಡಿದ್ದು, ಇವರು ಮುಂಬರುವ ಸೀಸನ್ನಲ್ಲೂ ಆರ್ಸಿಬಿ ಪರ ಕಣಕ್ಕಿಳಿಯುವುದು ಕನ್ಫರ್ಮ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ರಿಟೈನ್ ಮಾಡಿಕೊಳ್ಳಲಿದೆ. ಕಳೆದ 17 ಸೀಸನ್ಗಳಿಂದ ಆರ್ಸಿಬಿ ಪರ ಕಣಕ್ಕಿಳಿದಿರುವ ಕೊಹ್ಲಿಯನ್ನು ಈ ಬಾರಿ ಬೃಹತ್ ಮೊತ್ತ ನೀಡಿ ತಂಡದಲ್ಲೇ ಉಳಿಸಿಕೊಳ್ಳಲಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎರಡನೇ ರಿಟೈನ್ ಆಗಿ ನಾಯಕ ಫಾಫ್ ಡುಪ್ಲೆಸಿಸ್ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಡುಪ್ಲೆಸಿಸ್ ಅವರನ್ನು ಆರ್ಸಿಬಿ ಬಿಡುಗಡೆ ಮಾಡಲಿದೆ ಎನ್ನಲಾಗಿತ್ತು. ಆದರೆ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಕಾರಣ ಫಾಫ್ ಅವರನ್ನು ಮುಂದಿನ ಸೀಸನ್ಗಾಗಿ ತಂಡದಲ್ಲೇ ಉಳಿಸಿಕೊಳ್ಳಲು ಆರ್ಸಿಬಿ ನಿರ್ಧರಿಸಿದೆ ಎಂದು ಪಿಟಿಐ ವರದಿ ಮಾಡಿದೆ.
ಹಾಗೆಯೇ ಆರ್ಸಿಬಿ ತಂಡದ ಮೂರನೇ ರಿಟೈನ್ ಮೊಹಮ್ಮದ್ ಸಿರಾಜ್. ಕಳೆದ ಕೆಲ ವರ್ಷಗಳಿಂದ ಆರ್ಸಿಬಿ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿರುವ ಸಿರಾಜ್ ಅವರನ್ನು ಸಹ ಮೆಗಾ ಹರಾಜಿಗೂ ಮುನ್ನ ತಂಡದಲ್ಲೇ ಉಳಿಸಿಕೊಳ್ಳಲು ಆರ್ಸಿಬಿ ಫ್ರಾಂಚೈಸಿ ನಿರ್ಧರಿಸಿದೆ.
ಇನ್ನು ಕಳೆದ ಸೀಸನ್ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಆರ್ಸಿಬಿ ಬಿಡುಗಡೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ
ನಿಮ್ಮ ಪ್ರತಿಕ್ರಿಯೆ ಏನು?






