ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ: ಕೊಲೆ ಆರೋಪಿ ಕಾಲಿಗೆ ಫೈರಿಂಗ್!

ಬಳ್ಳಾರಿ:- ಇಲ್ಲಿನ ಹೊಸಪೇಟೆಯಲ್ಲಿ ರೌಡಿಶೀಟರ್ ಓರ್ವನ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಜರುಗಿದೆ. ಹಳೆ ದ್ವೇಷ ಹಿನ್ನೆಲೆ ವ್ಯಕ್ತಿ ಕೊಲೆ ಎಸ್ಕೇಪ್ ಆಗಿದ್ದ ರೌಡಿಶೀಟರ್ ಬಂಧಿಸಲು ತೆರಳಿದ ವೇಳೆ ಪೊಲೀಸರ ಮೇಲೆ ಆರೋಪಿ ಅಟ್ಯಾಕ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಗುಂಡೇಟು ತಿಂದ ಆರೋಪಿಯನ್ನು 30 ವರ್ಷದ ಹುಚ್ಚಕಾಳಿ ಎಂದು ಗುರುತಿಸಲಾಗಿದೆ. ಹುಚ್ಚಕಾಳಿ, ಬುಧವಾರ ರಾತ್ರಿ ಅಂದ್ರೆ ನಿನ್ನೆ ಹೊನ್ನೂರಸ್ವಾಮಿ ಎಂಬವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದ. ಹಳೆ ದ್ವೇಷ ಹಿನ್ನೆಲೆ ಹತ್ಯೆ ಮಾಡಿ, ಆರೋಪಿ ತಲೆಮರೆಸಿಕೊಂಡಿದ್ದ.
ಆರೋಪಿಯನ್ನು ಬಂಧಿಸಿ, ಕೊಲೆಗೆ ಬಳಸಿದ್ದ ಚಾಕು ವಶಕ್ಕೆ ಪಡೆಯುವ ವೇಳೆ, ಆತ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತ್ಮ ರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿಗೆ ಹಾಗೂ ದಾಳಿಯಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿಗೆ ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?






