ಬರ್ತ್ಡೇ ಗಿಫ್ಟ್ ವಿಚಾರಕ್ಕೆ ಶುರುವಾದ ಗಲಾಟೆ: ಪತ್ನಿ–ಅತ್ತೆಯ ಕೊಲೆಯಲ್ಲಿ ಅಂತ್ಯ!
ನವದೆಹಲಿ: ದೆಹಲಿಯ ರೋಹಿಣಿಯಲ್ಲಿ ಬರ್ತ್ಡೇ ಗಿಫ್ಟ್ ವಿಚಾರಕ್ಕೆ ಶುರುವಾದ ಗಲಾಟೆ ಪತ್ನಿ ಮತ್ತು ಅತ್ತೆಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಹೌದು ಕುಸುಮ್ ಸಿನ್ಹಾ (63) ಮತ್ತು ಅವರ ಮಗಳು ಪ್ರಿಯಾ ಸೆಹಗಲ್ (34) ಹತ್ಯೆಯಾದವರಾಗಿದ್ದು, ಕುಸುಮ್ ಅವರ ಮಗ ಮೇಘ ಸಿನ್ಹಾ (30) ಪೊಲೀಸರಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದ. ಸ್ಥಳಕ್ಕಾಗಮಿಸಿದ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.
ಆ.28 ರಂದು ಮೊಮ್ಮಗ ಚಿರಾಗ್ನ ಹುಟ್ಟುಹಬ್ಬವನ್ನು ಆಚರಿಸಲು ಮಗಳು ಪ್ರಿಯಾ ಮನೆಗೆ ಕುಸುಮ್ ಬಂದಿದ್ದಾರೆ. ಸಮಾರಂಭದ ಸಮಯದಲ್ಲಿ ಉಡುಗೊರೆಗಳ ವಿಷಯದಲ್ಲಿ ಪ್ರಿಯಾ ಮತ್ತು ಆಕೆಯ ಪತಿ ಯೋಗೇಶ್ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಕುಸುಮ್ ಅಲ್ಲೇ ಉಳಿದಿದ್ದರು.
ಆ.30 ರಂದು ಮೇಘ ತನ್ನ ತಾಯಿ ಕುಸುಮ್ಗೆ ಕರೆ ಮಾಡಿದ್ದಾರೆ. ಆದರೆ, ತಾಯಿ ಕರೆ ಸ್ವೀಕರಿಸಿಲ್ಲ. ಆಗ ಪ್ರಿಯಾಳ ಮನೆಗೆ ಬಂದಿದ್ದಾನೆ. ಮನೆಯಲ್ಲಿ ಯಾರೂ ಇರಲಿಲ್ಲ. ಬಾಗಿಲಿನ ಬಳಿ ರಕ್ತದ ಕಲೆ ಇರುವುದನ್ನು ಕಂಡಿದ್ದಾನೆ.
ನಂತರ ಬೀಗ ಒಡೆದಾಗ, ಕೋಣೆಯೊಳಗೆ ತನ್ನ ತಾಯಿ ಮತ್ತು ಸಹೋದರಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡಿದ್ದಾನೆ. ಪ್ರಿಯಾಳ ಪತಿ ಯೋಗೇಶ್ ಸೆಹಗಲ್, ನನ್ನ ತಾಯಿ ಮತ್ತು ಸಹೋದರಿ ಇಬ್ಬರನ್ನೂ ಕೊಂದು ಮಕ್ಕಳೊಂದಿಗೆ ಪರಾರಿಯಾಗಿದ್ದಾನೆ ಎಂದು ಮೇಘ ಆರೋಪಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?