ಬಸನಗೌಡ ಯತ್ನಾಳ್‌ʼಗೆ ಸಂಕಷ್ಟ: ಜಾಮೀನು ರಹಿತ ವಾರೆಂಟ್ ಜಾರಿ!

ಅಕ್ಟೋಬರ್ 17, 2024 - 12:03
 0  11
ಬಸನಗೌಡ ಯತ್ನಾಳ್‌ʼಗೆ ಸಂಕಷ್ಟ: ಜಾಮೀನು ರಹಿತ ವಾರೆಂಟ್ ಜಾರಿ!

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​​ಗೆ ಕೋರ್ಟ್​ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದೆ. ಹೌದು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ತಬಸ್ಸುಮ್ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ 42ನೇ ACMM ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಅವರು ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಸಚಿವ ದಿನೇಶ್‌ ಗುಂಡೂರಾವ್‌ ಪತ್ನಿ ತಬಸುಮ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್‌ 29 ರಂದು ಮಾನ್ಯ ಮಾಡಿದ್ದ ನ್ಯಾಯಾಲಯ ಶಾಸಕ ಯತ್ನಾಳ್‌ ಅಕ್ಟೋಬರ್‌ 16 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಸಮನ್ಸ್‌ ಜಾರಿಗೊಳಿಸಿತ್ತು.

ವಿಚಾರಣೆಗೆ ಶಾಸಕ ಯತ್ನಾಳ್‌ ಗೈರಾಗಿದ್ದರು. ಆರೋಪಿಯ ಈ ನಡೆ ಗಂಭೀರವಾಗಿ ಪರಿಗಣಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಜಾಮೀನು ರಹಿತ ವಾರಂಟ್‌ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್‌ 28 ಕ್ಕೆ ಮುಂದೂಡಿದೆ.

 ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow