ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ: ಆರೋಪಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಜುಲೈ 23, 2025 - 21:47
 0  7
ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ:  ಆರೋಪಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಮಂಗಳೂರು:- ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ತೋರಿದ ಆರೋಪಿ ಹಿಡಿದು ಸಾರ್ವಜನಿಕರು ಪೊಲೀಸರಿಗೊಪ್ಪಿಸಿದ ಘಟನೆ ಜರುಗಿದೆ. 

ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಓರ್ವ ಅನುಚಿತವಾಗಿ ವರ್ತಿಸಿದ್ದ. ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. 

ದೂರುದಾರೆಯ ಮಾಹಿತಿ ಪ್ರಕಾರ, ನಿನ್ನೆ ಮಂಗಳೂರಿನಿಂದ ಪುತ್ತೂರಿಗೆ ಬಸ್‌ನಲ್ಲಿ ಸಂಜೆ 6:30ರ ಸುಮಾರಿಗೆ ಪ್ರಯಾಣಿಸುತ್ತಿದ್ದಾಗ, ಬಂಟ್ವಾಳ ತಾಲೂಕಿನ ಮಾಣಿ ಬಳಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ. ತಕ್ಷಣ ದೂರುದಾರರು ಆತನಿಗೆ ಎಚ್ಚರಿಕೆ ನೀಡಿದ್ದು, ಬಳಿಕ ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಸ್‌ ಪುತ್ತೂರು ಬಸ್ ನಿಲ್ದಾಣ ತಲುಪಿದಾಗ, ಆರೋಪಿ ತುರ್ತು ನಿರ್ಗಮನ ಕಿಟಕಿಯ ಮೂಲಕ ಜಿಗಿದು ಪರಾರಿಯಾಗಲು ಯತ್ನಿಸಿದರೂ, ದೂರುದಾರರ ತಂದೆ ಮತ್ತು ಸಾರ್ವಜನಿಕರು ತಕ್ಷಣ ಪ್ರತಿಕ್ರಿಯಿಸಿ ಆರೋಪಿಯನ್ನು ಹಿಡಿದಿಟ್ಟಿದ್ದಾರೆ.

ಬಂಧಿತನನ್ನು ಮಂಗಳೂರಿನ ಮಹಮ್ಮದ್ ತೌಹೀದ್ ಎಂದು ಗುರುತಿಸಲಾಗಿದ್ದು, ಆತನನ್ನು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಒಪ್ಪಿಸಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow