ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಕೌಂಟ್ ಡೌನ್: ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿ ರವಿಚಂದ್ರನ್ ಅಶ್ವಿನ್!

ಸೆಪ್ಟೆಂಬರ್ 18, 2024 - 09:03
 0  16
ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಕೌಂಟ್ ಡೌನ್: ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿ ರವಿಚಂದ್ರನ್ ಅಶ್ವಿನ್!

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿ ಕೌಂಟ್ ಡೌನ್ ಶುರವಾಗಿದ್ದು, ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬೌಲರ್ ರವಿಚಂದ್ರನ್ ಅಶ್ವಿನ್ ಇದ್ದಾರೆ. 

ಗುರುವಾರದಿಂದ ಅಂದ್ರೆ ಸೆ. 19 ರಿಂದ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆಯುವ ಅವಕಾಶ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮುಂದಿದೆ. ಅದರಲ್ಲೂ ಈ ಸರಣಿಯ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಸ್​ನಲ್ಲಿ ಅತ್ಯಧಿಕ ವಿಕೆಟ್​ ಕಬಳಿಸಿ ಬೌಲರ್​ಗಳ ಪಟ್ಟಿಯಲ್ಲಿ ಅಶ್ವಿನ್​ ಅಗ್ರಸ್ಥಾನಕ್ಕೇರಬಹುದು.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಕಬಳಿಸಿದ ದಾಖಲೆ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಹೆಸರಿನಲ್ಲಿದೆ. 43 ಟೆಸ್ಟ್ ಪಂದ್ಯಗಳ 78 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಲಿಯಾನ್ ಈವರೆಗೆ 187 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆ ಮುರಿಯಲು ರವಿಚಂದ್ರನ್ ಅಶ್ವಿನ್​ಗೆ ಬೇಕಿರುವುದು ಕೇವಲ 14 ವಿಕೆಟ್​ಗಳು ಮಾತ್ರ. ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಅಶ್ವಿನ್ ಹದಿನಾಲ್ಕು ವಿಕೆಟ್ ಪಡೆದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ ಎನಿಸಿಕೊಳ್ಳಲಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ 35 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 67 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 7794 ಎಸೆತಗಳನ್ನು ಎಸೆದು 174 ವಿಕೆಟ್​ ಕಬಳಿಸಿದ್ದಾರೆ. ಅಂದರೆ WTC ನಲ್ಲಿ 200 ವಿಕೆಟ್​ಗಳ ಮೈಲುಗಲ್ಲು ಮುಟ್ಟಲು ಅಶ್ವಿನ್​ಗೆ ಬೇಕಿರುವುದು ಕೇವಲ 26 ವಿಕೆಟ್​ಗಳು ಮಾತ್ರ ಎನ್ನಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow