ಬಾಣಂತಿಯರ ಸರಣಿ ಸಾವು ಕೇಸ್: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಹಿಳಾ ಆಯೋಗ, ಎಲ್ಲೆಲ್ಲೂ ಇದೇ ಚರ್ಚೆ!

ಬಳ್ಳಾರಿ:- ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದು, ಚರ್ಚೆಗೆ ಗ್ರಾಸವಾಗಿದೆ.
ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್, ಶಸ್ತ್ರಚಿಕಿತ್ಸಾ ಕೊಠಡಿ, ಆಸ್ಪತ್ರೆಗೆ ಸರಬರಾಜು ಆಗುವ ನೀರಿನ ಟ್ಯಾಂಕ್‌ಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ. ಹೆರಿಗೆಯಾದ ಶಸ್ತ್ರಚಿಕಿತ್ಸಾ ಕೊಠಡಿ ಕೂಡ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.
ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಶಸ್ತ್ರಚಿಕಿತ್ಸೆಯಾದ ಬಳಿಕ ನಂಜು, ಬ್ಯಾಕ್ಟೀರಿಯಾದಿಂದ ಇನ್ಫೆಕ್ಷನ್ ಆಗುವ ಸಾಧ್ಯತೆ ಇರುತ್ತೆ. ಹೀಗಾಗಿ, ಶಸ್ತ್ರಚಿಕಿತ್ಸಾ ಕೊಠಡಿಯ ಗಾಳಿ, ಗೋಡೆ, ಟೇಬಲ್ ಇಡೀ ಹರಿಗೆ ಸ್ವ್ಯಾಬ್ ಸ್ಯಾಂಪಲ್ ವರದಿ ಬೇಕಿದೆ. ಶಸ್ತ್ರಚಿಕಿತ್ಸಾ ಕೊಠಡಿಯಿಂದಲೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಸ್ವಚ್ಛತೆ ಇಲ್ಲದಿದ್ದರೆ ಇನ್ಫೆಕ್ಷನ್ ಆಗಿ ಬಾಣಂತಿಯರು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅದರ ವರದಿ ಬೇಕು ಅಂತ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಬಾಣಂತಿಯರ ಸಾವಿಗೆ ಕೇವಲ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣನಾ ಅಥವಾ ಬೇರೆ ಇನ್ನಾವುದಾದರೂ ಕಾರಣ ಇದೆಯಾ ಎಂಬುವುದು ವರದಿ ಬಂದ ಬಳಿಕ ಗೊತ್ತಾಗುತ್ತೆ ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






