ಬಾಣಂತಿಯರ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊನೆಗೂ ಬಯಲಾಯ್ತು ಸಾವಿಗೆ ಕಾರಣ!

ನವೆಂಬರ್ 29, 2024 - 16:00
 0  12
ಬಾಣಂತಿಯರ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊನೆಗೂ ಬಯಲಾಯ್ತು ಸಾವಿಗೆ ಕಾರಣ!

ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಣಿಯರಿಗೆ ಸಿಸೇರಿಯನ್ ಮಾಡಲಾಗಿತ್ತು. ಸಿಸೇರಿಯನ್ ಬಳಿಕ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗುತ್ತಿತ್ತು. ನವೆಂಬರ್​ 09 ರಂದು‌ ಹೆರಿಗೆ ಬಳಿಕ ಏಕಾಏಕಿ 07 ಜನ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆರೋಗ್ಯದಲ್ಲಿನ ಏರುಪೇರಿಂದ ಕಳೆದ 15 ದಿನಗಳಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ. ಸದ್ಯ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು,

ಇಡೀ ಅನಾಹುತಕ್ಕೆ ಗ್ಲೂಕೋಸ್ ಸಹಿತ ಇಂಟ್ರಾವೀನಸ್ (ಐವಿ) ದ್ರಾವಣ ಕಾರಣ ಅನ್ನೋ ವರದಿ ಬಹಿರಂಗವಾಗಿದೆ. ಬಾಣಂತಿಯರ ಸರಣಿ ಸಾವಿನ ಕುರಿತು ತನಿಖೆ ನಡೆಸಲು ನೇಮಕವಾಗಿದ್ದ ತಂಡ ವರದಿಯೊಂದನ್ನು ನೀಡಿದ್ದು, ಹೆರಿಗೆಯಾಗುವ ಗರ್ಭಿಣಿಯರಿಗೆ ಶಸ್ತ್ರ ಚಿಕಿತ್ಸೆ ವೇಳೆ ನೀಡಿದ ದ್ರಾವಣ (ಗ್ಲೂಕೋಸ್) ಕಳಪೆಯಾಗಿತ್ತು ಎಂಬ ವರದಿ ನೀಡಿದೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ದ್ರಾವಣದ ಬಗ್ಗೆ ದೂರು ಬಂದಿರುವುದರಿಂದ ಇಂಟ್ರಾವೀನಸ್ ದ್ರಾವಣ ಬಳಕೆ ಮಾಡದಂತೆ ಈಗಾಗಲೇ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಗ್ಲೂಕೋಸ್ ಬಳಸದಂತೆ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿನ ಸಾವಿನ ಬಗ್ಗೆ ತನಿಖೆ ನಡೆಸಲು ಸರ್ಕಾರ ತಂಡ ಕಳುಹಿಸಿತ್ತು. ಇದೀಗ ಶಸ್ತ್ರ ಚಿಕಿತ್ಸೆ ವೇಳೆ ಈ ಕಳಪೆ ಐವಿ ದ್ರಾವಣದಿಂದ ದೇಹದಲ್ಲಿ ದಿಢೀರ್ ಬದಲಾವಣೆ, ಅಡ್ಡ ಪರಿಣಾಮಗಳಿಂದ ಸಾವಾಗಿದೆ ಎಂದು ತಂಡ ವರದಿ ಸಲ್ಲಿಕೆ ಮಾಡಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow