ಬಿಕ್ಲು ಶಿವ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳು ಬಂಧನ

ಬೆಂಗಳೂರು: ಬೆಂಗಳೂರು ನಗರದಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಅನಿಲ್, ಅರುಣ್ ಮತ್ತು ನವೀನ್ ಎಂದು ಗುರುತಿಸಲಾಗಿದೆ. ಇವರಲ್ಲಿ ಅರುಣ್ ಹಾಗೂ ನವೀನ್ – ಪ್ರಕರಣದ ಎ1 ಆರೋಪಿ ಜಗದೀಶನ ಆಪ್ತ ಸಹಚರರಾಗಿದ್ದಾರೆ.
ಜುಲೈ 15ರ ರಾತ್ರಿ, ಹಲಸೂರು ನಿವಾಸದ ಎದುರು ಕಾರಿನಲ್ಲಿ ಬಂದ ದುಷ್ಕರ್ಮಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿದ್ದ ಬಿಕ್ಲು ಶಿವ (ಶಿವಪ್ರಕಾಶ್) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದರು. ಈ ಸಂಬಂಧ ಪೊಲೀಸರು ಈಗಾಗಲೇ ಐವರು ಆರೋಪಿಗಳನ್ನು ಬಂಧಿಸಿದ್ದರು – ಕಿರಣ್, ವಿಮಲ್, ಪ್ರದೀಪ್, ಮದನ್ ಮತ್ತು ಸ್ಯಾಮ್ಯುವೆಲ್.
ಇದೀಗ, ತನಿಖೆ ಮುಂದುವರೆಸಿದ ಪೊಲೀಸರು ಇನ್ನೂ ಮೂವರನ್ನು ಬಂಧಿಸಿದ್ದು, ಇವರಲ್ಲಿ ಇಬ್ಬರು ಪ್ರಮುಖ ಆರೋಪಿ ಜಗದೀಶನ ಸಹಚರರು ಎನ್ನಲಾಗಿದೆ. ಪೊಲೀಸರು ಇನ್ನುಳಿದ ಆರೋಪಿಗಳ ಪತ್ತೆಗಾಗಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






