ಬಿಕ್ಲು ಶಿವ ಕೊಲೆ ಪ್ರಕರಣ: ಮಾಜಿ ಸಚಿವ ಬೈರತಿ ಬಸವರಾಜ್ʼಗೆ ಬಂಧನ ಭೀತಿ

ಸೆಪ್ಟೆಂಬರ್ 24, 2025 - 14:09
 0  17
ಬಿಕ್ಲು ಶಿವ ಕೊಲೆ ಪ್ರಕರಣ: ಮಾಜಿ ಸಚಿವ ಬೈರತಿ ಬಸವರಾಜ್ʼಗೆ ಬಂಧನ ಭೀತಿ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ ಎದುರಾಗಿದೆ. ಪ್ರಾಸಿಕ್ಯೂಷನ್ ಪರ ಎಸ್.ಪಿಪಿ ಬಿ.ಎನ್. ಜಗದೀಶ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಬೈರತಿ ಬಸವರಾಜ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸುವ ಅಗತ್ಯವಿರುವುದಾಗಿ ವಾದಿಸಿದ್ದಾರೆ.

ವಿಚಾರಣೆಯ ವೇಳೆ ಅವರು ಸುಳ್ಳು ಮಾಹಿತಿ ನೀಡಿರುವುದು ಮತ್ತು ಪ್ರಕರಣ ಸಂಬಂಧ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಮುಂದಿನ ಕ್ರಮವನ್ನು ನಿರ್ಧರಿಸಲಿದೆ.

ಸಿಐಡಿ ಪೊಲೀಸರ ಅರ್ಜಿಗೆ ಬೈರತಿ ಬಸವರಾಜ್ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕಳೆದ ಒಂದು ತಿಂಗಳಿನಿAದ ವಿಚಾರಣೆಗೇ ಕರೆದಿಲ್ಲ. ಈ ಹಿಂದೆ ಪೊಲೀಸರು ಕರೆದಾಗಲೆಲ್ಲಾ ವಿಚಾರಣೆಗೆ ಸಹಕರಿಸಿದ್ದಾರೆ. ಈಗ ಬಂಧನದ ಅಗತ್ಯವಿದೆ ಎಂದು ಹೇಳುತ್ತಿದ್ದಾರೆ ಎಂದು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವುದಾಗಿ ಹಿರಿಯ ವಕೀಲ ಸಂದೇಶ್ ಚೌಟ ವಾದಿಸಿದ್ದಾರೆ.

ರಾಜಕೀಯ ದೃಷ್ಟಿಯಿಂದ ಕಿರುಕುಳ ನೀಡಬಾರದು. ಎಷ್ಟು ದಿನಗಳ ಕಸ್ಟಡಿ ಬೇಕೆಂದು ಕೋರ್ಟ್ಗೆ ತಿಳಿಸಿ ಎಸ್‌ಪಿಪಿಗೆ ನ್ಯಾ. ಎಂ.ಐ.ಅರುಣ್ ಅವರಿದ್ದ ಪೀಠ ಕೇಳಿದೆ. ಅ.8 ರೊಳಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow