ಬಿಕ್ಲು ಶಿವನ ಪ್ರಕರಣದ ದಿನವೇ ಜಗ್ಗ ನಾಪತ್ತೆ: CID ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ..?
ಬೆಂಗಳೂರು:ರೌಡಿಶೀಟರ್ ಬಿಕ್ಲು ಶಿವನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಯಾಗಿರುವ ಜಗದೀಶ್ ಅಲಿಯಾಸ್ ಜಗ್ಗನನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಅರೆಸ್ಟ್ ಮಾಡಿದ್ದಾರೆ.
ಹೌದು ದೆಹಲಿ ವಿಮಾನ ನಿಲ್ದಾಣದಲ್ಲಿ ರೌಡಿ ಜಗ್ಗನನ್ನು ಸಿಐಡಿ ಪೊಲೀಸರು ಬಂಧಿಸಿದ್ದು, ಆತನನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತರಲಾಗುತ್ತಿದೆ. ಇದುವರೆಗೂ 21 ಮಂದಿ ಆರೋಪಿಗಳನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಬಿಜೆಪಿ ಶಾಸಕ ಬೈರತಿ ಬಸವರಾಜ್ ಕೂಡ ಎ5 ಆರೋಪಿಯಾಗಿದ್ದಾರೆ.
ಜಗ್ಗ ವಿದೇಶಕ್ಕೆ ಪರಾರಿಯಾಗಿರುವ ಶಂಕೆಯಲ್ಲಿ ಆತನ ಸುಳಿವಿಗೆ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು. ಜಗ್ಗ ದುಬೈಗೆ ಪರಾರಿಯಾಗಿದ್ದ ಎನ್ನಲಾಗಿತ್ತು. ಬಳಿಕ ಅಲ್ಲಿಂದ ಥೈಲ್ಯಾಂಡ್ ಗೆ ಪರಾರಿಯಾಗಿದ್ದ. ಬಳಿಕ ಆತ ಭಾರತಕ್ಕೆ ಬರುತ್ತಿದ್ದಾನೆ ಎಂಬ ಮಾಹಿತಿ ಹಿನ್ನಲೆ ಸಿಐಡಿ ತಂಡ ಆತನ ಚಲನವಲನ ಮ್ಯಾನಿಟರ್ ಮಾಡುತ್ತಿತ್ತು. ದೆಹಲಿ ಏರ್ಪೋರ್ಟ್ ನಲ್ಲಿ ಬಂಧಿಸಿ ಟ್ರಾನ್ಸಿಸ್ಟ್ ವಾರೆಂಟ್ ಪಡೆದು ಬೆಂಗಳೂರಿಗೆ ಕರೆತರಲಾಗುತ್ತಿದೆ.
ಜುಲೈ 15 ರಂದು ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವನನ್ನು ಆತನ ಮನೆ ಮುಂದೆಯ ರಸ್ತೆಯಲ್ಲಿಯೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಜಮೀನಿನ ವಿವಾದಕ್ಕೆ ಸಂಬಂಧಪಟ್ಟಂತೆ ಜಗ್ಗ @ ಜಗದೀಶ್ ಮತ್ತು ಬಿಕ್ಲು ಶಿವನ ಮತ್ತೆ ವೈಷಮ್ಯ ಬೆಳೆದಿದ್ದ ಹಿನ್ನಲೆ ಈ ಕೊಲೆ ನಡೆದಿದೆ ಎನ್ನಲಾಗಿದ್ದು, ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?