ಬಿಜೆಪಿ ಯುವ ಮುಖಂಡ ಬರ್ಬರ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್!

ಅಕ್ಟೋಬರ್ 8, 2025 - 22:01
 0  50
ಬಿಜೆಪಿ ಯುವ ಮುಖಂಡ ಬರ್ಬರ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್!

ಕೊಪ್ಪಳ: ಸಿನಿಮಿಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕನಾಗಿದ್ದು, ‌

ಭೀಮ್ ಅಲಿಯಾಸ್ ಭರತ್, ಸಲೀಂ, ವಿಜಯ್ ಮತ್ತು ಧನರಾಜ್​​ ಬಂಧಿತ ಆರೋಪಿಗಳಾಗಿದ್ದಾರೆ. ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಅಸ್ಪತ್ರೆಯ ಮುಂಭಾಗದಲ್ಲಿ ನಸುಕಿನ ಜಾವ 2 ಗಂಟೆಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿತ್ತು.

ರಾತ್ರಿ 2 ಗಂಟೆ ಸುಮಾರಿಗೆ ರಾಯಚೂರು ರಸ್ತೆಯ ಲೀಲಾವತಿ ಆಸ್ಪತ್ರೆ ಮುಂಭಾಗದಲ್ಲಿ ಬೈಕ್ ಮೇಲೆ ಸ್ನೇಹಿತರೊಂದಿಗೆ ಬರುತ್ತಿದ್ದ ವೆಂಕಟೇಶ್​ನಿಗೆ ಕಾರಿನಿಂದ ಡಿಕ್ಕಿ ಹೊಡೆಸಿದ್ದಾರೆ. ಈ ವೇಳೆ ವೆಂಕಟೇಶ್​ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಮನಸೋ ಇಚ್ಛೆ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ.

ವೆಂಕಟೇಶ್ ನನ್ನ ಪಕ್ಕಾ ಪ್ಲ್ಯಾನ್ ಮಾಡಿ ಕೊಲೆ ಮಾಡಿದ ನಾಲ್ವರು ಆರೋಪಿಗಳು ಪಕ್ಕದ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪೊಲೀಸರಿಗೆ ಶರಣಾಗಿದ್ದಾರೆ. ವೆಂಕಟೇಶ್​ ನನ್ನ ಹತ್ಯೆ ಮಾಡಿದ ನಾಲ್ವರು ಯುವಕರು 25 ವಯಸ್ಸಿನ ಒಳಗಿನವರು. ಇನ್ನು ಪ್ರಮುಖ ಆರೋಪಿಯಾದ ರವಿ ಹಾಗೂ ಕಾರ್ತಿಕ ಸೇರಿ ಇನ್ನು ಕೆಲವರು ಪರಾರಿಯಾಗಿದ್ದಾರೆ. ಬಂಧಿತರ ವಿಚಾರಣೆ ಬಳಿಕ ಹತ್ಯೆಯ ಹಿಂದಿರುವ ಇನ್ನು ಕೆಲವರ ಹೆಸರು ಬಹಿರಂಗವಾಗಲಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow