ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅಣ್ಣಾಮಲೈ!

ಚೆನ್ನೈ:- ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿರುವ ಅಣ್ಣಾಮಲೈ ಅವರು ದಿಢೀರ್ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ರಾಜೀನಾಮೆ ಬಳಿಕ ಮಾತನಾಡಿದ ಅಣ್ಣಾಮಲೈ,ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ ಎಂದು ಹೇಳಿದ್ದಾರೆ.
ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಹಾಗಾಗಿ ಈ ಬಾರಿ ನಾನು ಪಕ್ಷದ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ಇಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡಲ್ಲ ಅಂತ ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






