ಬಿಜೆಪಿಯ ಡಬ್ಬಲ್ ಗೇಮ್ ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಜೆಪಿಯ ಡಬ್ಬಲ್ ಗೇಮ್ ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟಿಸ್ ಹಿಂಪಡೆಯಲಾಗಿದೆ. ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್ ಕೊಟ್ಟಿದ್ದರು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಎಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟಿಸ್ ಕೊಟ್ಟಿದ್ದಾರೆ. ಬಿಜೆಪಿಯ ಈ ಡಬ್ಬಲ್ ಗೇಮ್ ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು.
16ನೇ ಹಣಕಾಸು ಆಯೋಗದವರು ಬೆಂಗಳೂರಿಗೆ ಭೇಟಿ ನೀಡಿದಾಗ 15ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಗಮನ ಸೆಳೆದಿದ್ದೇವೆ. ಸುಮಾರು 4.50 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ತೆರಿಗೆ ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು ₹55 ರಿಂದ ₹60 ಸಾವಿರ ಕೋಟಿ ಮಾತ್ರ. ಇದು ನ್ಯಾಯವೇ? ಈ ಬಗ್ಗೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ. ಬಿಜೆಪಿಯ ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಮಾತನಾಡಿದ್ದಾರೆಯೇ? ಎಂದು ಪ್ರಶ್ನಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






