ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ: 38 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ!

ಬೀದರ್:- ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 38 ಲಕ್ಷ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ಬೀದರ್ ಜಿಲ್ಲಾ ಪೊಲೀಸರು ಜಪ್ತಿ ಮಾಡಿದ್ದಾರೆ.
ಇಲ್ಲಿನ ಗಾಂಧಿಗಂಜ್ ಪೊಲೀಸರು ಸಂಗಮೇಶ್ವರ್ ಕಾಲೋನಿಯ ಮನೆಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ತಹಶೀಲ್ದಾರ್ ಸಮ್ಮುಖದಲ್ಲಿಯೇ ಸಂಗ್ರಹಿಸಿಟ್ಟಿದ್ದ ಮಾದಕ ವಸ್ತುವನ್ನು ಜಪ್ತಿ ಮಾಡಿ, ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಅಕ್ರಮ ಮಾದಕ ವಸ್ತುಗಳ ವಿರುದ್ಧದ ಪೊಲೀಸರ ಸಮರ ಮುಂದುವರಿದಿದ್ದು, ಇಂಚಿಂಚೂ ಮಾಹಿತಿ ಕಲೆ ಹಾಕಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






