ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿಗೆ ಒಲಿದ ಮೈಸೂರು ದಸರಾ ಉದ್ಘಾಟನೆ ಭಾಗ್ಯ!
ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಗೆ ಮೈಸೂರು ದಸರಾ ಉದ್ಘಾಟನೆ ಭಾಗ್ಯ ದೊರೆತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದಸರಾ ಮಹೋತ್ಸವ ಉದ್ಘಾಟನೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಅವರ ಹೃದಯ ದೀಪ ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು, ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು ಬಹಳ ಸಂತೋಷ ಆಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ರೈತ ಮತ್ತು ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಮಹಿಳೆಯನ್ನ ದಸರಾ ಮಹೋತ್ಸವ ಉದ್ಘಾಟನೆಗೆ ಆಹ್ವಾನ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಈ ಬಾರಿ ಮೈಸೂರು ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿದ್ದು, ಉದ್ಘಾಟನೆಗೆ ಮೈಸೂರು ಜಿಲ್ಲಾಡಳಿತವು, ಲೇಖಕಿ ಬಾನು ಮುಷ್ತಾಕ್ ಅವರಿಗೆ ಗೌರವದಿಂದ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?