ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಮಾಡಿದಂತಾಗುತ್ತದೆ: ಆರ್. ಅಶೋಕ್

ಫೆಬ್ರವರಿ 22, 2025 - 21:16
 0  13
ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಮಾಡಿದಂತಾಗುತ್ತದೆ: ಆರ್. ಅಶೋಕ್

ಬೆಂಗಳೂರು: ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಮಾಡಿದಂತಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ನಡೆಸುವ ಮನಸ್ಸಿಲ್ಲ. ಗ್ರೇಟರ್ ಬೆಂಗಳೂರು ರಚಿಸುತ್ತೇವೆ.

ಇನ್ನಷ್ಟು ಪ್ರದೇಶಗಳನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದು ಹೇಳುತ್ತಿದೆ. ಇರುವ ನಗರವನ್ನೇ ಸುಧಾರಣೆ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಹೊಸ ಪ್ರದೇಶಗಳ ಅಭಿವೃದ್ಧಿ ಹೇಗೆ ಸಾಧ್ಯ. ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಮಾಡಿದಂತಾಗುತ್ತದೆ. ಕೆಂಪೇಗೌಡರನ್ನು ನಂಬುವ ಜನರ ಮನಸ್ಸಿಗೆ ನೋವಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

ಈಗ 198 ವಾರ್ಡ್‌ಗಳಿಗೆ ಚುನಾವಣೆ ನಡೆಸಿದರೆ ಸಾಕು. ರಸ್ತೆ ಮೇಲ್ಭಾಗದಲ್ಲೇ ಸುರಂಗ ನಿರ್ಮಾಣವಾಗುತ್ತಿರುವಾಗ 150 ಅಡಿ ಕೆಳಗೆ ಸುರಂಗ ಕೊರೆಯಲು ಹೊರಟಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗಳಿಂದ ಜನರು ರೊಚ್ಚಿಗೆದ್ದಿದ್ದಾರೆ. ಬೆಂಗಳೂರು ಇಂದು ಸರಿ ಹೋಗಲಿದೆ ಎಂದು ಜನರು ಕಾಯುತ್ತಿದ್ದಾರೆ. ಬೆಂಗಳೂರಿಗೆ ಬೆಂಗಳೂರಿನವರೇ ಆದ ಸಚಿವರಿಲ್ಲ. ಬೇರೆ ಜಿಲ್ಲೆಯ ಸಚಿವರಿಗೆ ನಗರದ ಬಗ್ಗೆ ಆಸಕ್ತಿ ಇಲ್ಲ. ಸರ್ಕಾರದಿಂದಾಗಿ ಬೆಂಗಳೂರು ಅನಾಥವಾಗಿದೆ ಎಂದು ದೂರಿದರು. 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow