ಬೆಂಗಳೂರಿಗರೇ ಎಚ್ಚರ! ಇನ್ನಷ್ಟು ಹೆಚ್ಚಲಿದೆ ಕೊರೆಯುವ ಚಳಿ

ಡಿಸೆಂಬರ್ 29, 2024 - 12:31
 0  9
ಬೆಂಗಳೂರಿಗರೇ ಎಚ್ಚರ! ಇನ್ನಷ್ಟು ಹೆಚ್ಚಲಿದೆ ಕೊರೆಯುವ ಚಳಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿ  ಆರಂಭವಾಗಿದ್ದು, ಸಂಜೆಯಾಗುತ್ತಿದ್ದಂತೆ ಸಿಲಿಕಾನ್ಸಿಟಿ ಕೂಲ್ಕೂಲ್ಆಗುತ್ತದೆ. ಅದರಲ್ಲೂ ಅವಧಿ ಮೊದಲೇ ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದೆ. ಹೀಗಾಗಿ ಜನರು ಚಳಿಗೆ ಹೊರಗೆ ಬರಬೇಕೆಂದಾದರೆ ಬೆಚ್ಚಗಿನ ಬಟ್ಟೆಗಳನ್ನು ಧರಿಸಿಕೊಂಡು ಬರುವಂತಾಗಿದೆ.

ಹೌದು ತುಮಕೂರು,ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೆಯೇ ಉತ್ತರ ಒಳನಾಡಿನ ಹಾವೇರಿ, ಕಲಬುರಗಿ, ಕೊಪ್ಪಳ,. ರಾಯಚೂರು, ವಿಜಯನಗರ, ಯಾದಗಿರಿ, ಗದಗ, ಬಾಗಲಕೋಟೆಯಲ್ಲಿ ಚಳಿ ಹೆಚ್ಚಾಗಲಿದೆ.

ಸಿದ್ದಾಪುರ, ಹೊಸಕೋಟೆಯಲ್ಲಿ ಮಳೆಯಾಗಿದೆ. ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಎಚ್ಎಎಲ್ನಲ್ಲಿ 23.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 24.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow