ಬೆಂಗಳೂರಿನಲ್ಲಿ ಘೋರ ದುರಂತ: ಜಿಟಿ ಮಾಲ್'ನ 3ನೇ ಮಹಡಿಯಿಂದ ಬಿದ್ದು ಯುವಕ ಸಾ**ವು

ಅಕ್ಟೋಬರ್ 20, 2025 - 12:26
 0  13
ಬೆಂಗಳೂರಿನಲ್ಲಿ ಘೋರ ದುರಂತ: ಜಿಟಿ ಮಾಲ್'ನ 3ನೇ ಮಹಡಿಯಿಂದ ಬಿದ್ದು ಯುವಕ ಸಾ**ವು

ಬೆಂಗಳೂರು: ನಗರದ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್‌ನಲ್ಲಿ ಯುವಕನೊಬ್ಬ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮಾಲ್‌ನ ಮೂರನೇ ಮಹಡಿಯಿಂದ ಬಿದ್ದ ಯುವಕ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಾಲ್ ಬೆಳಗ್ಗೆ ತೆರೆಯುತ್ತಿದ್ದಂತೆಯೇ ಈ ದುರ್ಘಟನೆ ನಡೆದಿದ್ದು, ಅಚ್ಚರಿ ಮತ್ತು ಆತಂಕಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಆಯತಪ್ಪಿ ಬಿದ್ದದ್ದೋ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸುತ್ತಿದ್ದಾರೆ. ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ.

ಘಟನೆಯ ನಂತರ ಮಾಲ್‌ಗೆ ಸಾರ್ವಜನಿಕರ ಪ್ರವೇಶವನ್ನು ಪೊಲೀಸರು ತಾತ್ಕಾಲಿಕವಾಗಿ ನಿರ್ಬಂಧಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow