ಬೆಂಗಳೂರಿನಲ್ಲಿ ಪಾಗಲ್ ಪ್ರೇಮಿಯ ಅಟ್ಟಹಾಸ: ಕತ್ತು ಕೊ*ಯ್ದು ವಿದ್ಯಾರ್ಥಿನಿಯ ಬರ್ಬರ ಹ**ತ್ಯೆ!

ಅಕ್ಟೋಬರ್ 16, 2025 - 18:07
 0  24
ಬೆಂಗಳೂರಿನಲ್ಲಿ ಪಾಗಲ್ ಪ್ರೇಮಿಯ ಅಟ್ಟಹಾಸ: ಕತ್ತು ಕೊ*ಯ್ದು ವಿದ್ಯಾರ್ಥಿನಿಯ ಬರ್ಬರ ಹ**ತ್ಯೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರೀತಿ ನಿರಾಕರಿಸಿದ್ದಕ್ಕಾಗಿ ಯುವತಿ ಮೇಲೆ ಭೀಕರ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ ಟ್ರಾಕ್ ಬಳಿ 20 ವರ್ಷದ ಯುವತಿ ಯಾಮಿನಿಪ್ರಿಯಾ ಬರ್ಬರವಾಗಿ ಕೊಲೆಯಾಗಿದ್ದಾಳೆ.

ಪ್ರೀತಿ ನಿರಾಕರಿಸಿದ್ದ 20 ವರ್ಷದ ಯಾಮಿನಿ ಪ್ರಿಯಾ, ಕಾಲೇಜಿನಿಂದ ಮನೆಗೆ ಹೋಗುತ್ತಿದ್ದ ವೇಳೆ ರೈಲ್ವೆ ಟ್ರ್ಯಾಕ್ ಬಳಿ ಆಕೆ ಕಣ್ಣಿಗೆ ಖಾರದ ಪುಡಿ ಎರಚಿದ್ದಾನೆ. ಬಳಿಕ ಪ್ರಿಯಾ ಕುತ್ತಿಗೆ, ಮುಖಕ್ಕೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿ ಪರಿಯಾಗಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಪ್ರಿಯಾ ಸ್ಥಳದಲ್ಲೇ ಜೀವ ಬಿಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಘಟನೆಯಿಂದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ. ಇನ್ನು ಕೊಲೆಯಾದ ಯಾಮಿನಿ ಪ್ರಿಯಾ ತಂದೆ ಗೋಪಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,ನಹಲವು ತಿಂಗಳಿನಿಂದ ನನ್ನ ಮಗಳಿಗೆ ಹಿಂಸೆ ಕೊಡುತ್ತಿದ್ದ. ಹಿಂದೆ ಹಿಂದೆ ಹಿಂಬಾಲಿಸಕೊಂಡು ಬಂದು ಪ್ರೀತಿ ಮಾಡು ಎಂದು ಒತ್ತಾಯಿಸ್ತಿದ್ದ.

ಪೊಲೀಸ್ ಠಾಣೆಗೆ ಹೋಗಿ ದೂರು ಕೊಟ್ಟಿದ್ವೆ. ಈ ಸಂಬಂಧ ಆರು ತಿಂಗಳ ಹಿಂದೆ ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಂಡಿದ್ದರು. ಮತ್ತೆ ಏನಾದ್ರೂ ಬಂದು ಟಾರ್ಚರ್ ಕೊಡುತ್ತಿದ್ದಾನಾ ಎಂದು ಒಂದು ತಿಂಗಳ‌ ಹಿಂದೆ ಅಷ್ಟೇ ಮಗಳಿಗೆ ಕೇಳಿದ್ದೆ. ಇಲ್ಲ ಎಂದಿದ್ದಳು. ಆ ಹುಡುಗ ಏರಿಯಾದಲ್ಲಿ ಸರಿ ಇರಲಿಲ್ಲ. ಕಾಲೇಜು ಹೋಗಿ ಬರುವಾಗ ಹೀಗೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow