ಬೆಂಗಳೂರಿನಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ! 9 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆ!

ಸದ್ದಿಲ್ಲದೇ ಎಂಟ್ರಿ ಕೊಟ್ಟ ಕೊರೊನಾ: 9 ತಿಂಗಳ ಮಗುವಿನಲ್ಲಿ ಸೋಂಕು ದೃಢ ಇಡೀ ಜಗತ್ತನ್ನೇ ಕಾಡಿದ್ದ ಮಹಾಮಾರಿ ಕೊರೊನಾ ವೈರಸ್ ಈಗ ಮತ್ತೆ ಆತಂಕ ಹುಟ್ಟಿಸುತ್ತಿದೆ. ಹಲವು ದೇಶಗಳಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ.
ಇದೀಗ 9 ತಿಂಗಳ ಮಗುವೊಂದರಲ್ಲಿ ಕೊರೊನಾ ಪತ್ತೆಯಾಗಿದೆ. ಈ ಮಗು ಹೊಸಕೋಟೆಯ ದಂಪತಿಯದ್ದು. ಕಳೆದ ಮೂರ್ನಾಲ್ತು ದಿನಗಳಿಂದ ಮಗುವಿನ ಜ್ವರ ಕಾಣಿಸಿಕೊಂಡಿತ್ತು. ಪ್ರಾಥಮಿಕ ಔಷಧಿಗಳಿಗೆ ಜ್ವರ ಹೋಗಿರಲಿಲ್ಲ. ಹಾಗಾಗಿ, ಹೊಸಕೋಟೆಯಲ್ಲಿರುವ ಸ್ಥಳೀಯ ಆಸ್ಪತ್ರೆಯಲ್ಲಿ ಮಗುವನ್ನು ದಾಖಲಿಸಲಾಗಿತ್ತು. ಮಗುವಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು ಅದರಲ್ಲಿ ಪಾಸಿಟಿವ್ ಬಂದಿದೆ.
ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕೊಂಡೊಯ್ಯುವಂತೆ ಅಲ್ಲಿನ ವೈದ್ಯರು ಶಿಫಾರಸು ಮಾಡಿದ್ದರು. ಹಾಗಾಗಿ, ಮಗುವಿನ ಪೋಷಕರು, ಆ ಮಗುವನ್ನು ಕರೆತಂದು ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಮೇ 22ರ ರಾತ್ರಿ ಮಗುವನ್ನು ವಾಣಿ ವಿಲಾಸ ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ನಿಮ್ಮ ಪ್ರತಿಕ್ರಿಯೆ ಏನು?






