ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಸ್ನೇಹಿತನಿಂದಲೇ ಗೆಳತಿಯ ಮೇಲೆ ಅತ್ಯಾಚಾರ!

ಬೆಂಗಳೂರು: ನಿತ್ಯ ಹೆಣ್ಣು ಮಕ್ಕಳು ಅತ್ಯಾಚಾರದ ಬೆಂಕಿಯಲ್ಲಿ ಬೇಯುತ್ತಲೇ ಇದ್ದಾರೆ. ಅಪ್ರಾಪ್ತೆಯರ ಮೇಲೆ ಕುಟುಂಬಸ್ಥರೇ ನಡೆಸುವ ಲೈಂಗಿಕ ದೌರ್ಜನ್ಯಗಳು ಹೆಚ್ಚುತ್ತಲೇ ಇದ್ದು, ಇದೀಗ ಸ್ನೇಹಿತನಿಂದಲೇ ಗೆಳತಿಯ ಮೇಲೆ ಅತ್ಯಾಚಾರ (Rape) ಆರೋಪ ಕೇಳಿ ಬಂದಿದೆ.
ಬೆಂಗಳೂರಿನ ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಆರೋಪದ ಅಡಿ ದೂರು ನೀಡಿದ್ದಾಳೆ. ಈಗಾಗಲೇ ಆರೋಪಿಯನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






