ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂ*ದು ತಾಯಿ ಆತ್ಮಹ**ತ್ಯೆ!
ಬೆಂಗಳೂರು: ಭುವನೇಶ್ವರಿ ನಗರದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ. ಭುವನ್ (1.5), ವೃಂದಾ (4) ಹಾಗೂ ತಾಯಿ ವಿಜಲಕ್ಷ್ಮೀ ಮೃತ ದುರ್ದೈವಿಗಳಾಗಿದ್ದು, ಇಬ್ಬರು ಮಕ್ಕಳನ್ನ ಸಾಯಿಸಿ, ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.
ಮೂಲತಃ ರಾಯಚೂರು ಮಸ್ಕಿ ಮೂಲದ ರಮೇಶ್, ವಿಜಯಲಕ್ಷ್ಮಿ ಮದುವೆಯಾಗಿ ಐದು ವರ್ಷವಾಗಿತ್ತು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಪತಿ ರಮೇಶ್ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಸಾವಿನ ಬಗ್ಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.
ವಿಜಯಲಕ್ಷ್ಮಿ ಆತ್ಮಹತ್ಯೆಗೆ ಪತಿಯೇ ಕಾರಣ ಎಂದು ಸಂಬಂಧಿಕರು ದೂರಿದ್ದಾರೆ. ರಮೇಶ್ ಮತ್ತೊಂದು ಮದುವೆಯಾಗಿದ್ದು ಡಿವೋರ್ಸ್ ಕೊಡುವಂತೆ ಪತ್ನಿಗೆ ಬೆದರಿಕೆ ಹಾಕುತ್ತಿದ್ದ. ಹೀಗಾಗಿ ಪದೇ ಪದೇ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು. ಈ ವಿಚಾರ ಕುಟುಂಬಸ್ಥರ ಬಳಿ ವಿಜಯಲಕ್ಷ್ಮಿ ಹೇಳಿದ್ದಳು.
ಈತನ ಹಿಂಸೆಯಿಂದ ಬೇಸತ್ತು ವಿಜಯಲಕ್ಷ್ಮಿ ತನ್ನ ಮಕ್ಕಳನ್ನ ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಆರೋಪಿ ಸಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?