ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ತಡೆಗೋಡೆಗೆ ಕಾರು ಡಿಕ್ಕಿ: ತಂದೆ, ಮಗ ಸೇರಿ ಮೂವರು ಸಾವು!

ಚಿಕ್ಕನಾಯಕಹಳ್ಳಿಯ ತಮ್ಮಣ್ಣಗೌಡ (56), ಪುತ್ರ ಮುತ್ತುರಾಜ್ (28), ಹಾಗೂ ಹಾಸನ ಮೂಲದ ಚಾಲಕ ಸಚಿನ್ (27) ಮೃತರಾದವರು. ಅಪಘಾತದಲ್ಲಿ ಸಂಜು ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಫಲಿಸಲು ಕಾಯಲಾಗುತ್ತಿದೆ.
ಮೃತರು ಬೆಂಗಳೂರಿನಲ್ಲಿ ವಾಸವಾಗಿದ್ದವರು. ಅವರು ಮಡವಿನಕೊಡಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮಕ್ಕೆ ಹಾಜರಾಗಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






