ಬೆಂಗಳೂರು ವಿವಿಯಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಹಾಗಿದ್ರೆ ಲೈಬ್ರರಿ ಅಪ್ರೆಂಟಿಸ್ ಹುದ್ದೆಗಳಿಗೆ ಅಪ್ಲೈ ಮಾಡಿ!

ನಿರುದ್ಯೋಗಿಗಳೇ ಕೆಲಸ ಇಲ್ಲದೇ ಖಾಲಿ ಕೂತಿದ್ದೀರಾ!? ಅಥವಾ ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದೀರಾ!? ಹಾಗಿದ್ರೆ ಈ ಸುದ್ದಿ ಕಂಪ್ಲೀಟಾಗಿ ಓದಿ! ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಪ್ರಸಕ್ತ ಸಾಲಿನ ಒಂದು ವರ್ಷದ ಅವಧಿಗೆ ಲೈಬ್ರರಿ ಅಪ್ರೆಂಟಿಸ್ ತರಬೇತುದಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಹುದ್ದೆಗಳು:3ವಿದ್ಯಾರ್ಹತೆ: ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್ ಪದವಿ ಅಥವಾ ಕರ್ನಾಟಕ ಸರ್ಕಾರ ತಾಂತ್ರಿಕ ನಿರ್ದೇಶನಾಲಯದ ಅಡಿಯಲ್ಲಿ ಡಿಪ್ಲೊಮಾ ಇನ್ ಲೈಬ್ರರಿ ಸೈನ್ಸ್ ನಲ್ಲಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.
ಸೂಚನೆ:2024-25ನೇ ಸಾಲಿನಲ್ಲಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಕೂಡಾ ಅರ್ಜಿ ಸಲ್ಲಿಸಬಹುದು. ಈಗಾಗಲೇ 2023-24ನೇ ಸಾಲಿನಲ್ಲಿ ಅಪ್ರೆಂಟಿಸ್ಗಳಾಗಿ ತರಬೇತಿ ಪಡೆದಿರುವ ಹಾಗೂ ಅದರ ಹಿಂದಿನ ವರ್ಷಗಳಲ್ಲಿ ತರಬೇತಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ವೇತನ: 17,000 ರೂಪಾಯಿ ಮಾಸಿಕ ಶಿಷ್ಯವೇತನ.ಅರ್ಜಿ ಸಲ್ಲಿಕೆ: ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ಭರ್ತಿ ಮಾಡಿ, ಸ್ವಯಂ ದೃಢೀಕರಿಸಿ ಈ ವಿಳಾಸಕ್ಕೆ ಸಲ್ಲಿಸಬೇಕು.
ವಿಳಾಸ: ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು- 560 001ಈ ಹುದ್ದೆಗೆ ಸಂದರ್ಶನದ ಮೂಲಕ ಅಭ್ಯರ್ಥಿಗಳ ನೇಮಕಾತಿ ನಡೆಸಲಾಗುವುದು. ಅರ್ಜಿ ಸಲ್ಲಿಸಲು ಕಡೇಯ ದಿನಾಂಕ ನವೆಂಬರ್ 26. ಹೆಚ್ಚಿನ ಮಾಹಿತಿಗೆ www.bcu.ac.inಭೇಟಿ ನೀಡಿ.
ನಿಮ್ಮ ಪ್ರತಿಕ್ರಿಯೆ ಏನು?






