ಬೆನ್ನು ನೋವಿನ ಸಮಸ್ಯೆ: ಬೆಂಗಳೂರಿನ BGS ಆಸ್ಪತ್ರೆಗೆ ಭೇಟಿ ನೀಡಿದ ನಟ ದರ್ಶನ್

ನವೆಂಬರ್ 1, 2024 - 16:00
 0  22
ಬೆನ್ನು ನೋವಿನ ಸಮಸ್ಯೆ: ಬೆಂಗಳೂರಿನ BGS ಆಸ್ಪತ್ರೆಗೆ ಭೇಟಿ ನೀಡಿದ ನಟ ದರ್ಶನ್

ಬೆಂಗಳೂರು: ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಅವರಿಗೆ ಬೆನ್ನು ನೋವು ವಿಪರೀತವಾಗಿ ಕಾಡುತ್ತಿದೆ. ಕುಟುಂಬಸ್ಥರ ಬಳಿ ಭಾವುಕರಾಗಿರುವ ದರ್ಶನ್‌ ಅವರು ತಮ್ಮ ಕಷ್ಟಗಳನ್ನ ಹೇಳಿಕೊಂಡಿದ್ದು, ಇಂದು ದರ್ಶನ್ ಆಸ್ಪತ್ರೆಗೆ ಹೋಗಿದ್ದಾರೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಪೊಲೀಸ್‌ ಭದ್ರತೆಯೊಂದಿಗೆ ಮನೆಯಿಂದ ಹೊರಟಿದ್ದ ದರ್ಶನ್‌ 3 ಗಂಟೆ ವೇಳೆಗೆ ಆಸ್ಪತ್ರೆ ತಲುಪಿದರು. ಈ ವೇಳೆ ಪತ್ನಿ ವಿಜಯಲಕ್ಷ್ಮಿ ಕೂಡ ಜೊತೆಯಲ್ಲಿದ್ದರು. ಆಸ್ಪತ್ರೆ ಆವರಣಕ್ಕೆ ಬಂದ ಬಳಿಕ ಕುಂಟುತ್ತಲೇ ನಟ ಧನ್ವೀರ್‌ ಕೈ ಹಿಡಿದು ಒಳಗೆ ತೆರಳಿದರು. ಈ ವೇಳೆ ದರ್ಶನ್‌ ಭೇಟಿಗಾಗಿ ನಟಿ ಅಮೂಲ್ಯ, ಪತ್ನಿ ಜಗದೀಶ್ ಸಹ ಧಾವಿಸಿದ್ದರು.

ಸದ್ಯ ತಜ್ಞವೈದ್ಯರು ಪ್ರಾಥಮಿಕ ಕಾರ್ಯ ಶುರು ಮಾಡಿದ್ದು, ರೋಗಿಯ ಹೆಸರು ವಿವರ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಮೊದಲು ಬೆನ್ನುನೋವಿಗೆ ಸಂಬಂಧಿಸಿದಂತೆ ಸ್ಕ್ಯಾನಿಂಗ್‌ ಮಾಡಲಿರುವ ವೈದ್ಯರು, ಬಳಿಕ ಮುಂದಿನ ಚಿಕಿತ್ಸಾ ವಿಧಾನಗಳ ಬಗ್ಗೆ ಚರ್ಚಿಸಲಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow