ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿ ಅವರು ಸುಳ್ಳಿನ ಸರದಾರರೂ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೇ 4, 2025 - 22:03
 0  3
ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿ ಅವರು ಸುಳ್ಳಿನ ಸರದಾರರೂ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಹಾನಗಲ್: ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿ ಅವರು ಸುಳ್ಳಿನ ಸರದಾರರೂ ಆಗಿದ್ದಾರೆ. 
ಮೋದಿ ಅವರು ಭಾಷಣದಲ್ಲಿ ಕೊಟ್ಟ ಭರವಸೆಯಲ್ಲಿ ಒಂದೇ ಒಂದು ಜಾರಿ ಆಗಿರುವ ಉದಾಹರಣೆ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು. 

ಹಾವೇರಿ ಜಿಲ್ಲೆಯಲ್ಲಿ 650 ಕೋಟಿ ಮೌಲ್ಯದ ಅಭಿವೃದ್ಧಿ ಕಾರ್ಯಗಳನ್ನು ಜನಾರ್ಪಣೆಗೊಳಿಸಿ,  ನೂತನ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಹಾವೇರಿ ಜಿಲ್ಲೆ ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಅಧ್ಯಾತ್ಮಿಕವಾಗಿ ಶ್ರೇಷ್ಠತೆ ಪಡೆದಿರುವ ಜಿಲ್ಲೆ. ಈ ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ ಎಂದು ಸಿ.ಎಂಚುನಾವಣೆಗಳ ಭರವಸೆ ವ್ಯಕ್ತಪಡಿಸಿದರು. ನೀವು ಕಾಂಗ್ರೆಸ್ ಪಕ್ಷಕ್ಕೆ, ಈ ಸರ್ಕಾರಕ್ಕೆ ಕೊಟ್ಟ ಮತಗಳಿಗೆ ನಾವು ಘನತೆಯಿಂದ ಗೌರವಿಸಿದ್ದೇವೆ. ಚುನಾವಣೆಗೆ ಮೊದಲು ಕೊಟ್ಟ ಮಾತಿನಂತೆ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿಗೊಳಿಸಿ ನಿಮ್ಮ ಮತಗಳ ತೂಕ ಹೆಚ್ಚಿಸಿದ್ದೇವೆ ಎಂದರು. 

ಗ್ಯಾರಂಟಿಗಳಿಂದ ಖಜಾನೆ ಖಾಲಿ ಆಗಿದೆ ಎಂದು ಬಿಜೆಪಿ, ಜೆಡಿಎಸ್ ಮಾಡುತ್ತಿರುವ ಹಸಿ ಹಸಿ ಸುಳ್ಳು ನಂಬಬೇಡಿ. ಕಳೆದ ವರ್ಷದ ಬಜೆಟ್ ಗಾತ್ರಕ್ಕಿಂತ ಈ ಬಾರಿಯ ಬಜೆಟ್ ಗಾತ್ರ 38 ಸಾವಿರ ಕೋಟಿ ಹೆಚ್ಚಾಗಿದೆ. ಮಾತ್ರವಲ್ಲ ಈ ಬಾರಿ ಬಂಡವಾಳ ವೆಚ್ಚ 83 ಸಾವಿರ ಕೋಟಿ ತೆಗೆದಿರಿಸಿದ್ದೀವಿ. ಕಳೆದ ವರ್ಷಕ್ಕಿಂತ 31 ಸಾವಿರ ಕೋಟಿ ಬಂಡವಾಳ ವೆಚ್ಚ ಹೆಚ್ಚಾಗಿದೆ. ಇದಲ್ಲದೆ ಹೆಚ್ಚುವರಿವಾಗಿ 50 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ತೆಗೆದಿಟ್ಟಿದ್ದೇವೆ. ಒಟ್ಟು ಒಂದು ಲಕ್ಷದ 33 ಸಾವಿರ ಕೋಟಿ ರೂಪಾಯಿಯನ್ನು ಅಭಿವೃದ್ಧಿ ಕಾರ್ಯಗಳಿಗೆ ತೆಗೆದಿಟ್ಟಿದ್ದೀವಿ. ಇದುವೆಲ್ಲವೂ ಬಿಜೆಪಿಯ ಹಸಿ ಸುಳ್ಳುಗಳ ಸಂಪ್ರದಾಯಕ್ಕೆ ಉದಾಹರಣೆ ಎಂದು ವಿವರಿಸಿದರು.

ಆರ್.ಅಶೋಕ, ವಿಜಯೇಂದ್ರ ಈಗ ನಮ್ಮ ಸರ್ಕಾರದ ವಿರುದ್ಧ ನಕಲಿ ಜನಾಕ್ರೋಶ ಸಭೆ ನಡೆಸುತ್ತಿದ್ದಾರೆ. ಇವರಿಗೆ ಮಾನ ಮರ್ಯಾದೆ ಇದ್ದಿದ್ದರೆ ಕೇಂದ್ರ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು ಎಂದು ಟೀಕಿಸಿದರು. ಅಚ್ಛೇದಿನ್ ಆಯೆಗಾ ಅಂದ್ರಲ್ಲಾ ಮೋದಿ, ಎಲ್ರೀ ಬಂತು ಈ ಅಚ್ಛೆ ದಿನ್. ದುರ್ಬೀನು ಹಾಕಿ ಹುಡುಕಿದರೂ ಕಾಣಿಸುತ್ತಿಲ್ಲ ಎಂದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow